/newsfirstlive-kannada/media/media_files/2025/09/24/sl_bhyrappa_last_rites-2025-09-24-17-42-39.jpg)
ಬೆಂಗಳೂರು: ಭಾರತ ಕಂಡ ಪ್ರಸಿದ್ಧ ಕಾದಂಬರಿಕಾರ, ತತ್ವಜ್ಞಾನಿ ಎಸ್​​.ಎಲ್ ಭೈರಪ್ಪ (94) ಅವರು ನಮ್ಮನ್ನು ಅಗಲಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಹಿರಿಯ ಸಾಹಿತಿಗೆ ಸಂತಾಪ ಸೂಚಿಸುತ್ತಿದ್ದಾರೆ. ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಖ್ಯಾತ ಕಾದಂಬರಿಕಾರ ಎಸ್​​.ಎಲ್ ಭೈರಪ್ಪ ವಿಧಿವಶ ಹಿನ್ನೆಲೆಯಲ್ಲಿ ಸೆಪ್ಟೆಂಬರ್​ 25 ರಂದು ಅಂದರೆ ನಾಳೆ ಗುರುವಾರ ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ಮೈಸೂರಿನ ಪಾರ್ಥೀವ ಶರೀರವನ್ನು ಕಳಿಸಿಕೊಡಲಾಗುತ್ತೆ. ಮೈಸೂರನಲ್ಲೂ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಡಿದ್ದು ಶುಕ್ರವಾರ ಬೆಳಗ್ಗೆ ಅಂತ್ಯಕ್ರಿಯೆ ನೆರವೇರಲಿದೆ. ಅವರ ಹುಟ್ಟೂರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ಅವರ ಕುಟುಂಬಸ್ಥರು ಅಂತ್ಯಕ್ರಿಯೆಯನ್ನು ನೆರವೇರಿಸಲಿದ್ದಾರೆ.
ಇದನ್ನೂ ಓದಿ: ಖ್ಯಾತ ಕಾದಂಬರಿಕಾರ ಎಸ್.​ಎಲ್ ಭೈರಪ್ಪ ಅವರಿಗೆ ಪ್ರಧಾನಿ ಮೋದಿ ಸಂತಾಪ.. ಏನಂದ್ರು?
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನದ ಬಳಿಕ ಮಧ್ಯಾಹ್ನದ ನಂತರ ಎಸ್.ಎಲ್ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬಳಿಕ ಶುಕ್ರವಾರದಂದು ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಎಸ್.ಎಲ್ ಭೈರಪ್ಪ ನಿಧನ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಮತ್ತೊಬ್ಬ ಪುತ್ರ ಇಂಗ್ಲೆಂಡ್​ನ ಲಂಡನ್​​ನಲ್ಲಿದ್ದು ಈಗಾಗಲೇ ಭಾರತಕ್ಕೆ ಬರಲು ವಿಮಾನ ಹತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ