/newsfirstlive-kannada/media/media_files/2025/10/29/kanneri-swamiji-2025-10-29-17-52-27.jpg)
ಕನ್ನೇರಿ ಸ್ವಾಮೀಜಿಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ
ಲಿಂಗಾಯತ ಒಕ್ಕೂಟದ ಶ್ರೀಗಳ ಬಗ್ಗೆ ಕನ್ಹೇರಿ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡಿದ್ದರು. ಕನ್ನೇರಿ ಶ್ರೀಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧವನ್ನು ಪ್ರಶ್ನಿಸಿ ಕನ್ನೇರಿ ಸ್ವಾಮೀಜಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈಗ ಸುಪ್ರೀಂಕೋರ್ಟ್ ನಲ್ಲೂ ಕನ್ನೇರಿ ಸ್ವಾಮೀಜಿಗೆ ಹಿನ್ನಡೆಯಾಗಿದೆ. ವಿಜಯಪುರ ಜಿಲ್ಲಾಡಳಿತದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿದೆ.
ಕಲಬುರ್ಗಿ ಹೈಕೋರ್ಟ್ ಪೀಠದ ಆದೇಶ ಪ್ರಶ್ನಿಸಿ ಕನ್ನೇರಿ ಸ್ವಾಮೀಜಿ ಪರವಾಗಿ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 16 ರಿಂದ ಡಿಸೆಂಬರ್ 14ರ ವರೆಗೆ 2 ತಿಂಗಳು ಕನ್ನೇರಿ ಶ್ರೀಗಳಿಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಗಿದೆ. BNS ಕಾಯ್ದೆ 163(3) ಪ್ರಕಾರ ಮುನ್ನೆಚ್ಚರಿಕಾ ಕ್ರಮವಾಗಿ ಕನ್ನೇರಿ ಶ್ರೀ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧವನ್ನು ವಿಜಯಪುರ ಜಿಲ್ಲಾಡಳಿತ ಹೇರಿದೆ.
ಜಿಲ್ಲಾಡಳಿತದ ನಿರ್ಬಂಧದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈಗ ಸುಪ್ರೀಂ ಕೋರ್ಟ್‌ನಲ್ಲಿಯೂ ನಿರ್ಬಂಧ ಮುಂದುವರಿಕೆಯಾಗಿದೆ. ಹೈಕೋರ್ಟ್ ಆದೇಶವನ್ನೇ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ. ಹೀಗಾಗಿ ಕನ್ನೇರಿ ಸ್ವಾಮೀಜಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us