/newsfirstlive-kannada/media/media_files/2026/01/29/khadi-cloth-compulsory-to-govt-employees-1-2026-01-29-17-54-57.jpg)
ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ-ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
ಈ ಸಭೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ-ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು. ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ-ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು. ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್-ಪ್ಯಾಂಟ್ / ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳನ್ನು ಧರಿಸುವುದು. ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ/ ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳುನ್ನು ಧರಿಸುವಂತೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಉದ್ದೇಶಿತ ಈ ಯೋಜನೆಯನ್ನು ಸರ್ಕಾರಿ ನೌಕರರ ದಿನಾಚರಣೆ 21-04-2026 ರಂದು ಚಾಲನೆ ನೀಡಲಾಗುತ್ತೆ. ಈ ಸಂಬಂಧ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಲಿದೆ.
/filters:format(webp)/newsfirstlive-kannada/media/media_files/2026/01/29/khadi-cloth-compulsory-to-govt-employees-2026-01-29-17-55-13.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us