/newsfirstlive-kannada/media/media_files/2025/10/31/smg_wife_husband-2025-10-31-10-19-35.jpg)
ಶಿವಮೊಗ್ಗ: ಗಂಡನ ಮನೆಯಲ್ಲಿ ಕಿರುಕುಳ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೀವ ಬಿಟ್ಟಿರುವ ಘಟನೆ ಎನ್​ಆರ್​ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆ ಸಾವನ್ನಪ್ಪುತ್ತಿದ್ದಂತೆ ಗಂಡನ ಮನೆಯವರೆಲ್ಲ ಪರಾರಿ ಆಗಿದ್ದಾರೆ.
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಶಂಕರಳ್ಳಿ ಈಶ್ವರಪ್ಪ ಎಂಬುವರ ಪುತ್ರಿ ಪೂಜಾ (30) ಮೃತ ದುರ್ದೈವಿ. ಮೂರು ವರ್ಷಗಳ ಹಿಂದೆ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಎಂಬುವನೊಂದಿಗೆ ಪೂಜಾಳನ್ನ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿಗೆ ಎರಡೂವರೆ ವರ್ಷದ ಗಂಡು ಮಗು ಕೂಡ ಇತ್ತು.
ಇದನ್ನೂ ಓದಿ: ಸಂಭ್ರಮದಲ್ಲಿ ಶೋಕ.. ಇವತ್ತೇ ಮದುವೆ ಆಗಬೇಕಿದ್ದ ವಧು ಹೃದಯಾಘಾತಕ್ಕೆ ಬಲಿ
/filters:format(webp)/newsfirstlive-kannada/media/media_files/2025/10/31/smg_wife_husband_1-2025-10-31-10-19-45.jpg)
ಆದರೆ ಗಂಡನ ತಂದೆ, ತಾಯಿ ಹಾಗೂ ಸಹೋದರಿ ಸೇರಿ ಸೊಸೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಇದರಿಂದ ಬೇಸತ್ತ ಪೂಜಾ, ತಾಯಿ ಮನೆಗೆ ಬಂದು ತನ್ನ ಸಂಕಷ್ಟಗಳನ್ನೆಲ್ಲ ಹೇಳಿಕೊಂಡಿದ್ದಳು. ಆದರೂ ತವರು ಮನೆಯವರು ಸಮಾಧಾನ ಮಾಡಿ ವಾಪಸ್ ಕಳುಹಿಸಿದ್ದರು. ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು.
ಇದನ್ನು ನೋಡಿದ್ದ ಮನೆಯವರು ತಕ್ಷಣ ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪತಿ ಶರತ್ ಹಾಗೂ ಆತನ ತಂದೆ, ತಾಯಿ ಎಲ್ಲರೂ ಮೃತದೇಹ ಹಾಗೂ ಪುಟ್ಟ ಕಂದನ ಬಿಟ್ಟು ಪರಾರಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us