Breaking: ಕನ್ನಡದ ಹಿರಿಯ ಸಾಹಿತಿ ಎಸ್​ಎಲ್​ ಭೈರಪ್ಪ ಇನ್ನಿಲ್ಲ

ನಾಡಿನ ಹಿರಿಯ ಸಾಹಿತಿ ಎಸ್​ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದರು. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ಮೈಸೂರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು ಪ್ರಧಾನಿ ಮೋದಿ ಅವರನ್ನು ಬೆಂಬಲಿಸುತ್ತಿದ್ದರು.

author-image
Ganesh Kerekuli
sl byrappa
Advertisment

ನಾಡಿನ ಹಿರಿಯ ಸಾಹಿತಿ ಎಸ್​ಎಲ್ ಬೈರಪ್ಪ ಅವರು ನಿಧನರಾಗಿದ್ದಾರೆ. 94 ವರ್ಷದ ಬೈರಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು  ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಭಾಜನರಾಗಿದ್ದರು.  
ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದರು. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. 
ಮೈಸೂರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.  ಪ್ರಧಾನಿ ಮೋದಿ ಅವರನ್ನು ಬೆಂಬಲಿಸುತ್ತಿದ್ದರು. 
ಭೈರಪ್ಪ  ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. 
ಆದರೇ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು. 

sl byrappa 02




ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂಬುದು ಎಸ್‌.ಎಲ್. ಬೈರಪ್ಪ ಅವರ ಪೂರ್ಣ ಹೆಸರು. 
ಭೈರಪ್ಪ  ಅವರು ಕಾದಂಬರಿಗಳಲ್ಲದೆ ಸೌಂದರ್ಯಮೀಮಾಂಸೆ, ತತ್ವಶಾಸ್ತ್ರದ ಕುರಿತು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. 
ಪ್ರಮುಖ ಕೃತಿಗಳೆಂದರೇ,  ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಅನ್ವೇಷಣ, ಮಂದ್ರ, ಸಾರ್ಥ, ನಾಯಿನೆರಳು, ಧರ್ಮಶ್ರೀ, ದೂರಸರಿದರು, ಮತದಾನ ಮುಂತಾದವು ಅವರ ಕಾದಂಬರಿಗಳಾಗಿವೆ. 
ಬೈರಪ್ಪ ಅವರಿಗೆ ಬಂದ ಪದವಿಗಳು ಮತ್ತು ಪ್ರಶಸ್ತಿಗಳು ಅಂದರೇ,  ಭೈರಪ್ಪ ಅವರಿಗೆ 2010ರಲ್ಲಿ ಸರಸ್ವತಿ ಸಮ್ಮಾನ್, 2015ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್, 2016ರಲ್ಲಿ ಪದ್ಮಶ್ರೀ, ಮತ್ತು 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ. 
ವಿಶೇಷತೆ ಅಂದರೇ,  ಭೈರಪ್ಪನವರ ಕಾದಂಬರಿಗಳು ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿದ್ದು, ಅನೇಕ ಸಾರ್ವಜನಿಕ ಚರ್ಚೆಗಳಿಗೆ ಕಾರಣವಾಗಿವೆ. 

ಎಸ್. ಎಲ್. ಭೈರಪ್ಪ ಅವರು modernen ಕನ್ನಡ ಸಾಹಿತ್ಯದ ಒಬ್ಬ ಪ್ರಮುಖ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕ. ಅವರ ಕೃತಿಗಳು ಕನ್ನಡ ಸಾಹಿತ್ಯದಲ್ಲಿ ಜನಪ್ರಿಯವಾಗಿವೆ, ಇಂಗ್ಲೀಷ್ ಮತ್ತು ಇತರ ಭಾರತೀಯ ಭಾಷೆಗಳಿಗೆ ಅನುವಾದಗೊಂಡಿವೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

sL BYRAPPA NO MORE
Advertisment