/newsfirstlive-kannada/media/media_files/2025/09/18/bng_yoga_guru-2025-09-18-20-36-57.jpg)
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳದ ಆರೋಪ ಮೇಲೆ ಯೋಗ ಗುರು ನಿರಂಜನಾ ಮೂರ್ತಿಯನ್ನ ರಾಜರಾಜೇಶ್ವರಿ ನಗರದ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಾಗಿರುವ ಯೋಗ ಗುರು ನಿರಂಜನಾ ಮೂರ್ತಿಯೂ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರವನ್ನು ನಡೆಸುತಿದ್ದನು. ಇದೇ ಯೋಗ ಸೆಂಟರ್ಗೆ ಬರುತ್ತಿದ್ದ 17 ವರ್ಷದ ಅಪ್ರಾಪ್ತೆಗೆ ಇಲ್ಲಸಲ್ಲದ ಮಾತು ಹೇಳಿ ತನ್ನ ಕಡೆಗೆ ಸೆಳೆದುಕೊಂಡು ಆಕೆಯ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಸಂಬಂಧ ಪ್ರಕರಣ ದಾಖಲು ಆಗುತ್ತಿದ್ದಂತೆ ಆರೋಪಿಯು ತಲೆಮರೆಸಿಕೊಂಡಿದ್ದನು.
ಇದನ್ನೂ ಓದಿ:ಜಿಲ್ಲಾಸ್ಪತ್ರೆಯಲ್ಲಿ ಮೂವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ.. ಕುಟುಂಬದಲ್ಲಿ ಸಂತಸ
ಬಾಲಕಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ಇದರಿಂದ ಮುಂದೆ ನಿನ್ನ ಜೀವನಕ್ಕೆ ಸರ್ಕಾರಿ ಕೆಲಸವೂ ಸಿಗಬಹುದು ಎಂದು ಸುಳ್ಳು ಹೇಳಿ ದೌರ್ಜನ್ಯ ಎಸಗಿದ್ದನು. ಈ ಸಂಬಂಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದನು. ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ