ಕಲ್ಲು ತೂರಾಟದಿಂದ ರೈಲು ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ
ತಮ್ಮ, ತಮ್ಮ ಊರಿಗೆ ತೆರಳಲು ಪರದಾಡಿದ ನೂರಾರು ಪ್ರಯಾಣಿಕರು
ಇದ್ದಕ್ಕಿದ್ದಂತೆ ಸ್ಪೆಷಲ್ ರೈಲನ್ನು ರದ್ದುಗೊಳಿಸಿದ್ದಕ್ಕೆ ಪ್ರಯಾಣಿಕರ ಆಕ್ರೋಶ
ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆ ಸಿರ್ಹಿಂದ್ ರೈಲ್ವೇ ನಿಲ್ದಾಣದಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು ನಡೆಸಿ ದಾಂಧಲೆ ನಡೆಸಿದ್ದಾರೆ. ಉದ್ರಿಕ್ತಗೊಂಡ ಗುಂಪಿನಲ್ಲಿ ಕೆಲವರು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕಲ್ಲು ತೂರಾಟ, ಕೂಗಾಟದಿಂದ ರೈಲು ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಸಿರ್ಹಿಂದ್ ರೈಲ್ವೇ ನಿಲ್ದಾಣದಲ್ಲಿ ಸಿರ್ಹಿಂದ್‌ನಿಂದ ಸಹರ್ಸಾಗೆ ಸ್ಪೆಷಲ್ ರೈಲಿನ ವ್ಯವಸ್ಥೆ ಮಾಡಲಾಗಿತ್ತು. ಇದ್ದಕ್ಕಿದ್ದಂತೆ ವಿಶೇಷ ರೈಲನ್ನು ರೈಲ್ವೆ ಅಧಿಕಾರಿಗಳು ರದ್ದುಗೊಳಿಸಿದ ನಂತರ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರೊಚ್ಚಿಗೆದ್ದ ಪ್ರಯಾಣಿಕರು ಧಿಕ್ಕಾರ ಕೂಗುತ್ತಾ ರೈಲ್ವೇ ನಿಲ್ದಾಣದಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ.
Situation in Punjab after special train was cancelled!!
— Vijay Thottathil (@vijaythottathil) November 14, 2023
ಛತ್ ಪೂಜೆ ಹಿನ್ನೆಲೆಯಲ್ಲಿ ಪಂಜಾಬ್ನಿಂದ ಬಿಹಾರಕ್ಕೆ ಪ್ರಯಾಣಿಸಬೇಕಿದ್ದ ವಿಶೇಷ ರೈಲು ರದ್ದುಗೊಂಡ ಕಾರಣ ನೂರಾರು ಪ್ರಯಾಣಿಕರು ಕೋಪಗೊಂಡು ರೈಲ್ವೇ ನಿಲ್ದಾಣವನ್ನು ಧ್ವಂಸಗೊಳಿಸಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲಿನ ವ್ಯವಸ್ಥೆ ಮಾಡಿತ್ತು. ಆದರೆ ಪ್ರಯಾಣಿಕರ ಬೇಡಿಕೆಯ ಮಧ್ಯೆಯೂ ರದ್ದುಗೊಳಿಸಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಹಬ್ಬದ ಹಿನ್ನೆಲೆಯಲ್ಲಿ ತಮ್ಮ, ತಮ್ಮ ಊರಿಗೆ ತೆರಳಲು ಪರದಾಡಿದ ಪ್ರಯಾಣಿಕರು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ