ಬೈಕ್ ಟ್ಯಾಕ್ಸಿ ಸೇವೆಗೆ ಶೀಘ್ರದಲ್ಲೇ ಬ್ರೇಕ್​..? ಓಲಾ, ಉಬರ್​​ಗೆ ಟೆನ್ಶನ್ ಹೆಚ್ಚಿಸಿದ ರಾಜ್ಯ ಸರ್ಕಾರ

author-image
Veena Gangani
Updated On
ಬೈಕ್ ಟ್ಯಾಕ್ಸಿ ಸೇವೆಗೆ ಶೀಘ್ರದಲ್ಲೇ ಬ್ರೇಕ್​..? ಓಲಾ, ಉಬರ್​​ಗೆ ಟೆನ್ಶನ್ ಹೆಚ್ಚಿಸಿದ ರಾಜ್ಯ ಸರ್ಕಾರ
Advertisment
  • ಹೈಕೋರ್ಟ್​ ಆದೇಶದ ಬೆನ್ನಲ್ಲೇ ಮಾರ್ಗಸೂಚಿ ರಚಿಸುತ್ತಾ?
  • ಮುಂದಿನ ದಿನಗಳಲ್ಲಿ ಬೈಕ್ ಟ್ಯಾಕ್ಸಿ ರದ್ದುಗೊಳಿಸೋದು ಪಕ್ಕಾ
  • ಹೈಕೋರ್ಟ್ ಆದೇಶ ಕಾರ್ಯರೂಪಕ್ಕೆ ತರಲು ಸರ್ಕಾರ ಸೂಚನೆ

ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಬ್ರೇಕ್ ಬೀಳುತ್ತಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗಲೇ ಹೈಕೋರ್ಟ್ ಬೈಕ್ ಟ್ಯಾಕ್ಸಿ ಪ್ರಯಾಣಿಕರ ಸುರಕ್ಷತೆ ಸಂಬಂಧ ಮಹತ್ವದ ಆದೇಶ ಹೊರಡಿಸಿತ್ತು. ಇದೀಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಹೈಕೋರ್ಟ್ ಸೂಚನೆ ಪಾಲಿಸುವಂತೆ ಸಾರಿಗೆ ಇಲಾಖೆ ಕಾರ್ಯದರ್ಶಿಗೆ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸೀರೆ ಜಾಗಕ್ಕೆ ಪ್ಯಾಂಟ್ ಶರ್ಟ್​.. ಶ್ರಾವಣಿ ಸುಬ್ರಹ್ಮಣ್ಯ ಕಾಂತಮ್ಮತ್ತೆಯ ರೆಬೆಲ್​ ಲುಕ್​ಗೆ ವೀಕ್ಷಕರು ಫಿದಾ

ಏಪ್ರಿಲ್ 2 ರಂದು ಹೈಕೋರ್ಟ್ ಆದೇಶ ಹೊರಡಿಸಿತ್ತು. ಮೋಟಾರು ವಾಹನ ಕಾಯ್ದೆ-1988ರ ಅಡಿ ರಾಜ್ಯ ಸರ್ಕಾರ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುವ ತನಕ ಸಂಬಂಧಿತ ಸಂಸ್ಥೆಗಳಾದ ಓಲಾ, ಉಬರ್ ಮತ್ತು ಱಪಿಡೊಗಳು ತಮ್ಮ ಬೈಕ್ ಟ್ಯಾಕ್ಸಿ ಸೇವೆಯನ್ನು ಆರು ವಾರಗಳ ಒಳಗಾಗಿ ನಿರ್ಬಂಧಿಸಬೇಕು ಎಂದು ಆದೇಶ ಹೊರಡಿಸಿತ್ತು.

publive-image

ಇದೀಗ ಹೈ ಕೋರ್ಟ್ ಆದೇಶ ಕಾರ್ಯರೂಪಕ್ಕೆ ತರಲು ಸರ್ಕಾರ ಸೂಚನೆ ನೀಡಿದೆ. ಅಲ್ಲದೇ ಸಾರಿಗೆ ರಾಮಲಿಂಗಾರೆಡ್ಡಿ ಅವರು ಹೈ ಕೋರ್ಟ್ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಹೈ-ಕೋರ್ಟ್​ ಆದೇಶದ ಬೆನ್ನಲ್ಲೇ ಮಾರ್ಗಸೂಚಿ ರಚಿಸುತ್ತಾ? ಅಥವಾ ಬೈಕ್ ಟ್ಯಾಕ್ಸಿ ರದ್ದುಗೊಳಿಸುತ್ತಾ? ಅನ್ನೋದು ಕುತೂಹಲ ಮೂಡಿದೆ.

ಹೈಕೋರ್ಟ್​ ಹಿಂದೆ ಏನ್ ಹೇಳಿದೆ..?

ಮುಂದಿನ 6 ವಾರದೊಳಗೆ ಬೈಕ್ ಟ್ಯಾಕ್ಸಿ ಸೇವೆಯನ್ನು ನಿರ್ಬಂಧಿಸುವಂತೆ ಓಲಾ, ಉಬರ್, ಱಪಿಡೋ ಸಂಸ್ಥೆಗಳಿಗೆ ಹೈಕೋರ್ಟ್ ಗಡುವು ನೀಡಿದೆ. 6 ವಾರಗಳ ನಂತರ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಖಚಿತ‌ಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿದೆ. ಮೋಟಾರ್ ವಾಹನ ಕಾಯ್ದೆ 1988 ಸೆಕ್ಷನ್ 3 ಅಡಿಯಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸರ್ಕಾರ ಸೂಕ್ತ ಮಾರ್ಗಸೂಚಿ ಹೊರಡಿಸಬೇಕು. ಅಲ್ಲಿಯತನಕ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ಇಲ್ಲವೆಂದ ಹೈಕೋರ್ಟ್ ಹೇಳಿದೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವ ಅನುಮತಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಉಬರ್ ಇಂಡಿಯಾ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್​ಪೊರ್ಟೇಶನ್ ಸರ್ವೀಸಸ್ ಪ್ರೈವೆಟ್ ಲಿಮಿಟೆಡ್, ಎಎನ್​ಐ ಟೆಕ್ನಾಲಜಿಸ್ ಪ್ರೈವೆಟ್ ಲಿಮಿಟೆಡ್ ಕಂಪನಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್​ ನಡೆಸಿತ್ತು. ಇದೀಗ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್​ಪ್ರಸಾದ್ ಅವರಿದ್ದ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅರ್ಜಿದಾರರು ಏನು ಹೇಳಿದ್ದರು..?

ಬೈಕ್ ಟ್ಯಾಕ್ಸಿ ಸೇವೆ ಒದಗಿಸುವುದಕ್ಕೆ ಸಂಬಂಧಿಸಿದಂತೆ 2022, ಫೆಬ್ರವರಿ 19 ರಂದು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ನೀಡಿರುವ ಮನವಿಯನ್ನು ಪರಿಗಣಿಸಲು ಮತ್ತು ಸಾರಿಗೆ ವಾಹನಗಳಾಗಿ ಪರವಾನಗಿಯ ನೋದಣಿ ಕೋರುವ ಮೋಟಾರ್ ಬೈಕ್​ಗಳಿಗೆ ಅನುಮತಿ ನೀಡಲು ಸಾರಿಗೆ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ವಾಹನ ಸೇವೆ ಕಂಪನಿಗಳು ಮನವಿ ಮಾಡಿಕೊಂಡಿದ್ದವು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment