/newsfirstlive-kannada/media/post_attachments/wp-content/uploads/2024/12/IND-vs-ENG.jpg)
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸೀರೀಸ್ ಮುಗಿಯುತ್ತಿದ್ದಂತೆ ಟೀಮ್ ಇಂಡಿಯಾ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ಏಕದಿನ ಹಾಗೂ ಟಿ20 ಸರಣಿ ಆಡಲಿದೆ. ಇಂಗ್ಲೆಂಡ್ ಮತ್ತು ಟೀಮ್ ಇಂಡಿಯಾ ನಡುವಿನ ಟಿ20 ಸರಣಿ ಜನವರಿ 22ರಿಂದ ಶುರುವಾಗಲಿದೆ. ಇದಾದ ಬಳಿಕ ಏಕದಿನ ಸರಣಿ ಶುರುವಾಗಲಿದ್ದು, ಫೆಬ್ರವರಿ 12ಕ್ಕೆ ಕೊನೆ ಮ್ಯಾಚ್ ನಡೆಯಲಿದೆ.
ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿ ನಂತರ ಚಾಂಪಿಯನ್ಸ್ ಟ್ರೋಫಿ ಶುರುವಾಗಲಿದೆ. ಇದಕ್ಕೂ ಮುನ್ನ ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಬಲಿಷ್ಠ ತಂಡ ಪ್ರಕಟಿಸಿದೆ. ಭಾರತ ವಿರುದ್ಧ ಟಿ20 ಮತ್ತು ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಲೀಡ್ ಮಾಡಲಿದ್ದಾರೆ. ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಫಿಲ್ ಸಾಲ್ಟ್ ಮತ್ತು ಮಾರ್ಕ್ ವುಡ್ ರೀತಿಯ ಸ್ಟಾರ್ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ಮಧ್ಯೆ 3 ಏಕದಿನ ಹಾಗೂ 5 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಟಿ20 ಸರಣಿಯ ಮೊದಲ ಪಂದ್ಯ ಜನವರಿ 22 ರಂದು ನಡೆಯಲಿದೆ. ಇದಾದ ನಂತರ ಫೆಬ್ರವರಿ 6 ರಿಂದ ಫೆಬ್ರವರಿ 12 ರವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.
ಇಂಗ್ಲೆಂಡ್ ಏಕದಿನ ತಂಡ ಹೀಗಿದೆ!
ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಟಿ20 ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ!
ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೇಡೆನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಇದನ್ನೂ ಓದಿ:ಟೀಮ್ ಇಂಡಿಯಾದಿಂದ ರಾಹುಲ್ಗೆ ಕೊಕ್; ಆರ್ಸಿಬಿ ಸ್ಟಾರ್ ಆಟಗಾರನಿಗೆ ಜಾಕ್ಪಾಟ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ