/newsfirstlive-kannada/media/post_attachments/wp-content/uploads/2024/08/Team-India-1.jpg)
ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ದಿನಗಣನೆ ಶುರುವಾಗಿದೆ. ಈ ಮಹತ್ವದ ಟೂರ್ನಿಗೆ ಕೇವಲ 45 ದಿನಗಳು ಮಾತ್ರ ಬಾಕಿ ಇದೆ. ಹಾಗಾಗಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟಿಸಲು ಬಿಸಿಸಿಐ ಮುಂದಾಗಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ವೇಳೆಗೆ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ತಂಡದ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಸಿಗಲಿದೆ. ಈಗಾಗಲೇ ಬಿಸಿಸಿಐ ಟೀಮ್ ಇಂಡಿಯಾ ಪ್ರಕಟಿಸಲು ಮಾರ್ಗಸೂಚಿ ಸಿದ್ಧಪಡಿಸುತ್ತಿದೆ.
ಟೀಮ್​ ಇಂಡಿಯಾದಲ್ಲಿ ಭಾರೀ ಪೈಪೋಟಿ
ಕ್ಯಾಪ್ಟನ್​ ರೋಹಿತ್​ ಶರ್ಮಾ, ಶುಭ್ಮನ್​​ ಗಿಲ್​, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಟೀಮ್​ ಇಂಡಿಯಾದಲ್ಲಿ ಸ್ಥಾನ ಪಡೆಯುವುದು ಪಕ್ಕಾ ಆಗಿದೆ. ಸ್ಟಾರ್​​ ವೇಗಿ ಮೊಹಮ್ಮದ್​ ಶಮಿ ಕೂಡ ಕಮ್​ಬ್ಯಾಕ್​ ಮಾಡಲಿದ್ದಾರೆ.
ಏಕದಿನ ವಿಶ್ವಕಪ್ 2023ರ ಟೂರ್ನಿ ಬಳಿಕ ಟೀಮ್​ ಇಂಡಿಯಾ ಶ್ರೀಲಂಕಾ ಪ್ರವಾಸ ಕೈಗೊಂಡಿತ್ತು. ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಟೀಮ್​ ಇಂಡಿಯಾ ಸೋತಿತ್ತು. ಹಲವು ಯುವ ಆಟಗಾರರು ಟೀಮ್​ ಇಂಡಿಯಾ ಭಾಗವಾಗಿದ್ದರು. ರಿಷಬ್​ ಪಂತ್, ಹಾರ್ದಿಕ್ ಪಾಂಡ್ಯ ಮುಂತಾದ ಸ್ಟಾರ್ ಆಟಗಾರರ ಬದಲಿಗೆ ಯುವಕರಿಗೆ ಅವಕಾಶ ನೀಡಲಾಗಿತ್ತು. ಈಗ ಚಾಂಪಿಯನ್ಸ್ ಟ್ರೋಫಿಗೆ ಗುಡ್​ನ್ಯೂಸ್​ ಒಂದಿದ್ದು, ಇವರು ಎಲ್ಲರೂ ಇರಲಿದ್ದಾರೆ. ಜತೆಗೆ ಏಕದಿನ ತಂಡದಲ್ಲಿ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಕೂಡ ಅವಕಾಶ ಪಡೆಯಲಿದ್ದಾರೆ.
ಬಲಿಷ್ಠ ಟೀಮ್​ ಇಂಡಿಯಾ ಹೀಗಿದೆ!
ರೋಹಿತ್ ಶರ್ಮಾ (ಕ್ಯಾಪ್ಟನ್​​), ಶುಭ್ಮನ್​ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರಿಷಬ್​ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us