/newsfirstlive-kannada/media/post_attachments/wp-content/uploads/2024/02/Satyam.jpg)
ಉಡುಪಿ: ನಕಲು ಮಾಡಿ ಸಿಕ್ಕಿಬಿದ್ದ ಹಿನ್ನಲೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧಿಸಿದಂತೆ ಕಟ್ಟಡದಿಂದ ಜಿಗಿಯುವ ವಿಡಿಯೋ ವೈರಲ್ ಆಗಿದೆ. ಕೆಲ ಹೊತ್ತು ಕಟ್ಟಡದ ಮೇಲಿಂದ ಕೆಳಗೆ ನೋಡುತ್ತಾ ನಿಂತಿದ್ದ ವಿದ್ಯಾರ್ಥಿ ಕಟ್ಟಡದಿಂದ ಧುಮುಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಣಿಪಾಲದ ವಿವಿಯ ಅಲೈಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್(20) ಕಳೆದ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದನು. ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ನಕಲು ಮಾಡಿ ಸಿಕ್ಕಿಬಿದ್ದಿದ್ದನು.
ಸತ್ಯಂ ಸುಮನ್ ನಕಲು ಮಾಡಿ ಸಿಕ್ಕಿಬಿದ್ದ ಹಿನ್ನೆಲೆ ಪರೀಕ್ಷಾ ಕೊಠಡಿಯಿಂದ ಆತನನ್ನು ಪರೀಕ್ಷಾ ಉಸ್ತುವಾರಿ ಹೊರದಬ್ಬಿದ್ದರು. ಇದರಿಂದ ಮನನೊಂದು ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಆತ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನು.
ಉಡುಪಿ: ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ನಕಲು ಮಾಡಿ ಸಿಕ್ಕಿಬಿದ್ದ ಹಿನ್ನಲೆ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿಡಿಯೋ ವೈರಲ್ ಆಗಿದೆ. ಮಣಿಪಾಲದ ವಿವಿಯ ಅಲೈಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್(20) ಕಳೆದ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದನು#Manipal#studentpic.twitter.com/XRRSu9EREU
— Harshith Achrappady (@HAchrappady)
ಉಡುಪಿ: ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ನಕಲು ಮಾಡಿ ಸಿಕ್ಕಿಬಿದ್ದ ಹಿನ್ನಲೆ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿಡಿಯೋ ವೈರಲ್ ಆಗಿದೆ. ಮಣಿಪಾಲದ ವಿವಿಯ ಅಲೈಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್(20) ಕಳೆದ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದನು#Manipal#studentpic.twitter.com/XRRSu9EREU
— Harshith Achrappady (@HAchrappady) February 20, 2024
">February 20, 2024
ಬೇರೆಯವರ ಮೊಬೈಲ್​ನಲ್ಲಿ ಸೆರೆಯಾದ ದೃಶ್ಯದಂತೆ ಸತ್ಯಂ ಸುಮನ್ ಕಟ್ಟಡದಿಂದ ಇತರೆ ವಿದ್ಯಾರ್ಥಿಗಳನ್ನು ನೋಡ ನೋಡುತ್ತಲೇ ಜಿಗಿದಿದ್ದಾನೆ. ಮಣಿಪಾಲ ವಿಶ್ವವಿದ್ಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಜಿಗಿದು ಸಾವನ್ನಪ್ಪಿದ್ದಂತೆ ಇತರ ವಿದ್ಯಾರ್ಥಿಗಳು ಪ್ಯಾನಿಕ್ ಆಗಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us