ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ಸಾವು
ರಾಯಚೂರಿನ ದೇವದುರ್ಗದ ವಸತಿ ಶಾಲೆಯಲ್ಲಿ ಘಟನೆ
ರಾಯಚೂರು: ವಿದ್ಯಾರ್ಥಿಯೊಬ್ಬಳು ನೇಣು ಬಿಗಿದುಕೊಂಡ ಆತ್ಮಹತ್ಯೆಗೆ ಶರಣಾಗಿರೋ ಘಟನೆ ದೇವದುರ್ಗದ ವಸತಿ ಶಾಲೆಯಲ್ಲಿ ನಡೆದಿದೆ. ಪವಿತ್ರ (15) ಮೃತ ವಿದ್ಯಾರ್ಥಿನಿ.
ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿದ್ಯಾರ್ಥಿನಿಯು ಬಿ.ಆರ್.ಗುಂಡಾ ಗ್ರಾಮ ನಿವಾಸಿಯಾಗಿದ್ದಳು. 10ನೇ ತರಗತಿ ಓದುತ್ತಿದ್ದ ಪವಿತ್ರಗೆ ಓದಲು ಇಷ್ಟವಿರಲಿಲ್ಲವಂತೆ. ಹೀಗಾಗಿ ಆಗಾಗ ವಸತಿ ಶಾಲೆಯಿಂದ ತಪ್ಪಿಸಿಕೊಂಡು ಮನೆಗೆ ಹೋಗುತ್ತಿದ್ದಳಂತೆ. ಅದಕ್ಕೆ ಪೋಷಕರು ಮನೆಯಲ್ಲಿ ಬುದ್ಧಿ ಹೇಳಿ ಮತ್ತೆ ವಸತಿ ಶಾಲೆಗೆ ಬಿಟ್ಟು ಬಂದಿದ್ದಾರೆ. ಬಳಿಕ ತರಗತಿ ಕೋಣೆಯ ಫ್ಯಾನ್‌ಗೆ ವೇಲ್ನಿಂದ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ