newsfirstkannada.com

ಕುಲಸಚಿವರ ಕಚೇರಿ ಎದುರೇ ಸೂಸೈಡ್​​ಗೆ ಯತ್ನಿಸಿದ ವಿದ್ಯಾರ್ಥಿ.. ಕಾರಣವೇನು..?

Share :

09-09-2023

  ಮಾತ್ರೆ ಸೇವಿಸಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ‌!

  ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ ಪೊಲೀಸ್​

  ಒಂಟಿಕೊಪ್ಪದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ

ಮೈಸೂರು: ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಮೈಸೂರು ವಿವಿಯ ಕ್ರಾಫರ್ಡ್ ಹಾಲ್ ಕಚೇರಿಯಲ್ಲಿ ನಡೆದಿದೆ.

ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರು ವೆಂಕಟೇಶ್​ ಎಂಬುವವರು ವಿದ್ಯಾರ್ಥಿ ಮೇಲೆ ದೈಹಿಕವಾಗಿ ಹಲ್ಲೆ ಮಾಡಿ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕರ ವಿರುದ್ಧ ಠಾಣೆಯಲ್ಲಿ ದೂರನ್ನು ನೀಡಿದರು ಸಹ ಪೊಲೀಸರು ನಿರ್ಲಕ್ಷ್ಯ ತೋರಿಸಿದ್ದರು.

ಹೀಗಾಗಿ ಮನನೊಂದ ವಿದ್ಯಾರ್ಥಿ ಗಗನ್ ಮಾತ್ರೆ ಸೇವಿಸಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಗಗನ್​ನನ್ನು ಒಂಟಿಕೊಪ್ಪದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಖಾಸಗಿ ಆಸ್ಪತ್ರೆಗೆ ದಾಖಲಾದ ಗಗನ್​​ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕುಲಸಚಿವರ ಕಚೇರಿ ಎದುರೇ ಸೂಸೈಡ್​​ಗೆ ಯತ್ನಿಸಿದ ವಿದ್ಯಾರ್ಥಿ.. ಕಾರಣವೇನು..?

https://newsfirstlive.com/wp-content/uploads/2023/09/mys.jpg

Load More