ಅಭ್ಯರ್ಥಿಗಳ ಬೃಹತ್ ಪ್ರತಿಭಟನೆಗೆ ಮಣಿದ ಸರ್ಕಾರ.. ಒಂದೇ ಹಂತದಲ್ಲಿ ಪರೀಕ್ಷೆ ನಡೆಸಲು CM ಸೂಚನೆ

author-image
Bheemappa
Updated On
ಅಭ್ಯರ್ಥಿಗಳ ಬೃಹತ್ ಪ್ರತಿಭಟನೆಗೆ ಮಣಿದ ಸರ್ಕಾರ.. ಒಂದೇ ಹಂತದಲ್ಲಿ ಪರೀಕ್ಷೆ ನಡೆಸಲು CM ಸೂಚನೆ
Advertisment
  • ಮೂರು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದ್ದ ಅಭ್ಯರ್ಥಿಗಳು
  • ಪರೀಕ್ಷೆ ಬರೆಯಲಿರುವ 10 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು
  • ರಾಜ್ಯದಲ್ಲಿ ಒಂದೇ ಹಂತದಲ್ಲಿ ಪರೀಕ್ಷೆ ನಡೆಸಲು ಆಗುತ್ತಾ?

ನವದೆಹಲಿ: ಸದ್ಯ ಕರೆಯಲಾಗಿರುವ ಸರ್ಕಾರಿ ಉದ್ಯೋಗಗಳಿಗೆ ಒಂದೇ ಹಂತದಲ್ಲಿ ಪರೀಕ್ಷೆ ನಡೆಸಬೇಕು ಎಂದು ಕೈಗೊಳ್ಳಲಾಗಿದ್ದ ಪ್ರತಿಭಟನೆಗೆ ಕೊನೆಗೂ ಯಶಸ್ಸು ಸಿಕ್ಕಿದೆ. ಪರೀಕ್ಷಾ ಆಕಾಂಕ್ಷಿಗಳು ಪ್ರಯಾಗ್ರಾಜ್​ನಲ್ಲಿ ನಡೆಸುತ್ತಿ ಹೋರಾಟಕ್ಕೆ ಉತ್ತರ ಪ್ರದೇಶದ ಸಿಎಂ ಯೋಗಿ ಸರ್ಕಾರ ಮಣಿದಿದ್ದು ಒಂದೇ ಹಂತದಲ್ಲಿ ಪರೀಕ್ಷೆ ನಡೆಸುವುದಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶದ ಲೋಕಸೇವಾ ಆಯೋಗವು ಪಿಸಿಎಸ್ (Provincial Civil Services), ಆರ್‌ಒ/ಎಆರ್‌ಒ (Review Officer/Assistant Review Officer) ಹುದ್ದೆಗಳಿಗೆ ಹಲವು ಹಂತದಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿತ್ತು. ಆದರೆ ಇದಕ್ಕೆ ಪರೀಕ್ಷ ಅಭ್ಯರ್ಥಿಗಳು ಭಾರೀ ವಿರೋಧ ವ್ಯಕ್ತಪಡಿಸಿ ಪ್ರಯಾಗರಾಜ್‌ನಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಕೈಗೊಂಡಿದ್ದರು. ಸದ್ಯ ಅಭ್ಯರ್ಥಿಗಳ ಹೋರಾಟಕ್ಕೆ ಸರ್ಕಾರ ಮಣಿದಿದೆ.

ಇದನ್ನೂ ಓದಿ:Elections; ಅತ್ಯಂತ ಶ್ರೀಮಂತ ಬಿಜೆಪಿ ಅಭ್ಯರ್ಥಿ.. ₹500 ಕೋಟಿ ಇದ್ದ ಆಸ್ತಿ 5 ವರ್ಷದಲ್ಲಿ 3,000 ಕೋಟಿಗೂ ಹೆಚ್ಚು!

publive-image

ಸದ್ಯ ಈ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ಅವರು ಪರೀಕ್ಷೆಯ ಸ್ವರೂಪ ಮರುಪರಿಶೀಲಿಸುವಂತೆ ಉತ್ತರ ಪ್ರದೇಶದ ಲೋಕಸೇವಾ ಆಯೋಗಕ್ಕೆ ನಿರ್ದೇಶನ ನೀಡಿದ್ದಾರೆ. ಅಭ್ಯರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಆರ್​ಒ/ಎಆರ್​ಒ (ಪ್ರಿಲಿಮಿನರಿ) ಪರೀಕ್ಷೆ- 2023 ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ. ಪರೀಕ್ಷೆಯ ಸ್ವರೂಪಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಪರಿಗಣಿಸುವ ಕಾರ್ಯವನ್ನು ಹೊಂದಿರುವ ಸಮಿತಿಯು ಶೀಘ್ರದಲ್ಲೇ ವಿವರವಾದ ವರದಿಯನ್ನು ಸಲ್ಲಿಸಲಿದೆ.

ಇದನ್ನೂ ಓದಿ: ಈ ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.. ಎಷ್ಟು ಉದ್ಯೋಗಗಳು ಖಾಲಿ ಇವೆ?

ಉತ್ತರ ಪ್ರದೇಶದ ಲೋಕಸೇವಾ ಆಯೋಗವು ಒಟ್ಟು 10,76,004 ಅಭ್ಯರ್ಥಿಗಳನ್ನು ಗಮನದಲ್ಲಿ ಇಟ್ಟುಕೊಂಡು ಒಂದೇ ದಿನದಲ್ಲಿ ಪರೀಕ್ಷೆ ನಡೆಸಬೇಕಾಗಿದೆ. ಸರ್ಕಾರಿ ಉದ್ಯೋಗಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ, ಗುಣಾತ್ಮಕ ಮತ್ತು ನ್ಯಾಯೋಚಿತವಾಗಿ ನಡೆಸಬೇಕಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿ ತೆಗೆದುಕೊಂಡು ಯುಪಿಪಿಎಸ್​ಸಿ ಮಾರ್ಗಸೂಚಿ ರೂಪಿಸಬೇಕಿದೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment