newsfirstkannada.com

Lok Sabha Election: ಇಂದಿನಿಂದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Share :

Published March 20, 2024 at 9:28am

    ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

    ಏಪ್ರಿಲ್ 19ರಂದು ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ

    ಮಾರ್ಚ್​​​ 16 ರಿಂದಲೇ ದೇಶದಾದ್ಯಂತ ಜಾರಿಯಾದ ನೀತಿ ಸಂಹಿತೆ ಜಾರಿಯಾಗಿದೆ

ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. 18ನೇ ಅವಧಿಯ ಲೋಕಸಭೆ ಚುನಾವಣೆಯು ಏಪ್ರಿಲ್ 19ರಿಂದ ಆರಂಭವಾಗಲಿದ್ದು, ಜೂನ್ 4ಕ್ಕೆ ದೇಶದ ಆಡಳಿತದ ಚುಕ್ಕಾಣಿ ಹಿಡಿಯೋರು ಯಾರು ಎಂದು ಗೊತ್ತಾಗಲಿದೆ. ಇನ್ನು ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಇದನ್ನು ಓದಿ: ಮೋದಿ, ರಾಹುಲ್, ಅಮಿತ್ ಶಾ.. 10 VIP ಅಭ್ಯರ್ಥಿಗಳ ಕ್ಷೇತ್ರ, ಎದುರಾಳಿ ಕುರಿತ ಕಂಪ್ಲೀಟ್ ಡೀಟೇಲ್ಸ್..!

ಮೊದಲ ಹಂತದ ಚುನಾವಣೆಗೆ ಇಂದಿನಿಂದ ಮಾರ್ಚ್ 27ರವರೆಗೆ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್ 19, ಎರಡನೇ ಹಂತದ ಮತದಾನ ಏಪ್ರಿಲ್ 26, ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಅದೇ ರೀತಿ ಮೇ 13 ರಂದು ನಾಲ್ಕನೇ, ಮೇ 20 ರಂದು ಐದನೇ, ಮೇ 25 ರಂದು 6 ಹಾಗೂ ಜೂನ್ 1 ರಂದು ಏಳನೇ ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 89, ಮೂರನೇ ಹಂತದಲ್ಲಿ 94, ನಾಲ್ಕನೇ ಹಂತದಲ್ಲಿ 96, ಐದನೇ ಹಂತದಲ್ಲಿ 49, ಆರನೇ ಹಂತದಲ್ಲಿ 57 ಹಾಗೂ ಏಳನೇ ಹಂತದಲ್ಲಿ 57 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ ತಮಿಳುನಾಡಿನ 39 ಲೋಕಸಭಾ ಕ್ಷೇತ್ರ, ಉತ್ತರ ಪ್ರದೇಶದ 6, ರಾಜಸ್ಥಾನದ 12, ಮಧ್ಯಪ್ರದೇಶ 6, ಉತ್ತರಾಖಂಡ, ಅಸ್ಸಾಂ, ಮಹಾರಾಷ್ಟ್ರ 5 ಕ್ಷೇತ್ರ ಬಿಹಾರದ 4, ಪಶ್ಚಿಮ ಬಂಗಾಳ 3 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 27ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಮಾರ್ಚ್ 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಘೋಷಣೆಯಾಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Lok Sabha Election: ಇಂದಿನಿಂದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

https://newsfirstlive.com/wp-content/uploads/2024/03/2024-loka-saba.jpg

Load More