newsfirstkannada.com

ನಾಳೆ ಮಂಡ್ಯದಲ್ಲಿ ನಟ ದರ್ಶನ್ ಜೊತೆ ಸುಮಲತಾ ಅಂಬರೀಶ್ ಮಹತ್ವದ ಸಭೆ; ಅಂತಿಮ ನಿರ್ಧಾರ ಏನು?

Share :

Published April 2, 2024 at 4:33pm

Update April 2, 2024 at 5:13pm

  ಸುಮಲತಾ ಅಂಬರೀಶ್ ಅವರು ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಾರಾ ಇಲ್ವಾ?

  ನಾಳೆ ಮಂಡ್ಯದಲ್ಲೇ ಅಂತೆ, ಕಂತೆಗಳ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆ

  ಖುದ್ದು ಕುಮಾರಸ್ವಾಮಿ ಅವರೇ ಸುಮಲತಾ ಅವರ ಮನೆಗೆ ತೆರಳಿ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ರಾಜಕೀಯ ಇನ್ನೂ ಕುತೂಹಲ ಕೆರಳಿಸಿದೆ. ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಾರಾ ಇಲ್ವಾ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ನಡೆ ಕುತೂಹಲ ಮೂಡಿಸಿದ್ದು, ನಾಳೆ ಅಂತೆ, ಕಂತೆಗಳ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.

ನಾಳೆ ಮಂಡ್ಯದಲ್ಲೇ ಅಧಿಕೃತ ತೀರ್ಮಾನ ಘೋಷಣೆ ಮಾಡಲು ಸಂಸದೆ ಸುಮಲತಾ ಅಂಬರೀಶ್ ಅವರು ನಿರ್ಧರಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಅವರು ನಾಳೆಯ ಸಭೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಸೇರಿದಂತೆ ಮುಖಂಡರ, ಆತ್ಮೀಯರು ಭಾಗಿಯಾಗುತ್ತಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.

ಇದನ್ನೂ ಓದಿ: ರಾಜಕಾರಣ‌ ಬಿಟ್ಟರೆ ಪುತ್ರನ‌ ರಾಜಕೀಯ ಭವಿಷ್ಯ ಅತಂತ್ರ; ತ್ರಿಶಂಕು ಸ್ಥಿತಿಯಲ್ಲಿ ಸುಮಲತಾ ಅಂಬರೀಶ್..!

ಏಪ್ರಿಲ್ 3ರ ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಸುಮಲತಾ ಅಂಬರೀಶ್ ಪೊಸ್ಟ್ ಮಾಡಿದ್ದಾರೆ.

ರೆಬೆಲ್ ಲೇಡಿ ನಿರ್ಧಾರ ಏನು?
ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಈ ಬಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಸಾಕಷ್ಟು ಪ್ರಯತ್ನ ಮಾಡಿದರು. ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಜೊತೆಗೆ ಮಹತ್ವದ ಮಾತುಕತೆ ನಡೆಸಿದರು. ಆದರೆ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ ಪಾಲಾಗಿದ್ದು, ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧಿಸುವುದು ಖಚಿತವಾದ ಮೇಲೆ ಮಂಡ್ಯ ರಾಜಕೀಯದ ಚಿತ್ರಣ ಬದಲಾಗಿದೆ. ಇತ್ತೀಚೆಗೆ ಖುದ್ದು ಕುಮಾರಸ್ವಾಮಿ ಅವರು ಸುಮಲತಾ ಅವರ ಮನೆಗೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆಯ ಬಳಿಕ ಸುಮಲತಾ ಅಂಬರೀಶ್ ಅವರು ಎಲ್ಲರ ಸಲಹೆ ಸೂಚನೆಗಳನ್ನ ಪರಿಗಣಿಸಿ ಯಾರಿಗೂ ನೋವು ತರದ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಾಳೆ ಮಂಡ್ಯದಲ್ಲಿ ನಟ ದರ್ಶನ್ ಜೊತೆ ಸುಮಲತಾ ಅಂಬರೀಶ್ ಮಹತ್ವದ ಸಭೆ; ಅಂತಿಮ ನಿರ್ಧಾರ ಏನು?

https://newsfirstlive.com/wp-content/uploads/2024/04/Sumalatha-Ambareesh-Mandya.jpg

Load More