newsfirstkannada.com

ಕಾವೇರಿ ಸಮಸ್ಯೆ ಬಗೆಹರಿಸಿ; ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸುಮಲತಾ ಅಂಬರೀಶ್ ಚರ್ಚೆ

Share :

Published September 18, 2023 at 7:50pm

    ನವದೆಹಲಿಯಲ್ಲಿದ್ದ ಕೇಂದ್ರ ಜಲ ಶಕ್ತಿ ಸಚಿವರಿಗೆ ಮನವಿ ಸಲ್ಲಿಕೆ!

    ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟ ಸಂಸದೆ ಸುಮಲತಾ

    ಬರ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಲು ಕೇಂದ್ರದಿಂದ ತಂಡ ಕಳುಸಿಸಬೇಕು!

ನವದೆಹಲಿ: ಮಳೆಯ ಕೊರತೆಯಿಂದಾಗಿ ಕರ್ನಾಟಕದಲ್ಲಿ ಬರ ಎದುರಾಗಿದೆ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂಬ ನಿಟ್ಟಿನಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಭೇಟಿ ಮಾಡಿದ್ದಾರೆ.

ಇದನ್ನು ಓದಿ: ಈ ವಾರ ಕನ್ನಡಿಗರ ಮನ ಗೆದ್ದ ಸೀರಿಯಲ್​ ಯಾವುದು? ಪ್ರೇಕ್ಷಕರು ಕೊಟ್ಟ ಮಾರ್ಕ್ಸ್​ ಎಷ್ಟು?

ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಂಸದೆ ಸುಮಲತಾ ಅಂಬರೀಶ್ ಅವರು, ನಾಡಿನ ಜನತೆಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಬರ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಲು ಕೇಂದ್ರದಿಂದ ತಂಡವನ್ನು ಕಳುಹಿಸಬೇಕು. ವರದಿ ಪಡೆದು ಕೇಂದ್ರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದಿದ್ದಾರೆ. ಜೊತೆಗೆ ಕಾವೇರಿ ಕೊಳ್ಳದ ಸಮಸ್ಯೆಯನ್ನೂ ವಿವರಿಸಿರುವ ಬಗ್ಗೆ ಮನವರಿಕೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾವೇರಿ ಸಮಸ್ಯೆ ಬಗೆಹರಿಸಿ; ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸುಮಲತಾ ಅಂಬರೀಶ್ ಚರ್ಚೆ

https://newsfirstlive.com/wp-content/uploads/2023/09/sumalatha-2.jpg

Load More