newsfirstkannada.com

‘ಮಂಡ್ಯದಲ್ಲಿ BJP ಸೋಲಿಗೆ ನೀವೇ ಕಾರಣ’ ಎಂದವರಿಗೆ ಸುಮಲತಾ ಖಡಕ್​​ ಉತ್ತರ; ಏನಂದ್ರು..?

Share :

Published May 22, 2023 at 11:55am

Update September 25, 2023 at 9:25pm

    ಮಂಡ್ಯದಲ್ಲಿ BJP ಸೋಲಿಗೆ ಸುಮಲತಾ ಅಂಬರೀಶ್ ಕಾರಣನಾ?

    ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಸಂಸದೆ ಖಡಕ್​ ವಾರ್ನಿಂಗ್​!

    ಟ್ರೋಲರ್ಸ್​ಗಳಿಗೆ ಸಖತ್​ ಟಾಂಗ್​​ ಕೊಟ್ಟ ಸುಮಲತಾ!

ಮಂಡ್ಯ: ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಬರೋಬ್ಬರಿ 135 ಸೀಟು ಗೆದ್ದು ಅಧಿಕಾರಕ್ಕೆ ಬಂದಿದೆ. ಅದರಲ್ಲೂ ಮಂಡ್ಯದಲ್ಲಿ ಒಂದು ಕ್ಷೇತ್ರ ಹೊರತುಪಡಿಸಿ ಕಾಂಗ್ರೆಸ್​​ ಇನ್ನುಳಿದ 6 ಕ್ಷೇತ್ರಗಳಲ್ಲೂ ಕ್ಲೀನ್​ ಸ್ವೀಪ್​​ ಮಾಡಿದೆ. ಮಂಡ್ಯದಲ್ಲಿ ಬಿಜೆಪಿ ಸೋಲಿಗೆ ಸುಮಲತಾ ಅವರೇ ಕಾರಣ ಎಂದು ವರದಿಯಾಗಿತ್ತು.

ಈ ಬಗ್ಗೆ ಟ್ವೀಟ್​ ಮಾಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್​​, ಕಪೋಕಲ್ಪಿತ ವರದಿ ಮಾಡುತ್ತಿರುವ ಕೆಲವು ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ವರದಿಗೆ ಇದು ನನ್ನ ಪ್ರತ್ಯುತ್ತರ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಚಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಿತು. ಪಕ್ಷವು ಘೋಷಣೆ ಮಾಡಿದ ನನ್ನ ಕ್ಷೇತ್ರದ ಎಲ್ಲ ಅಭ್ಯರ್ಥಿಗಳು ಫಸ್ಟ್ ಟೈಮ್ ಚುನಾವಣೆ ಎದುರಿಸಿದವರು. ಆದರೂ ಎದುರಾಳಿಗಳ ವಿರುದ್ಧ ಸಮರ್ಥವಾಗಿ ಹೋರಾಟ ಮಾಡಿದ್ದಾರೆ. ಅಲ್ಲದೇ ಪ್ರಚಾರಕ್ಕೆ ನಮಗಿದ್ದದ್ದು ಎರಡ್ಮೂರು ವಾರಗಳಷ್ಟೇ ಸಮಯ. ಆದರೂ ಹೊಸ ಪಡೆಯನ್ನು ಕಟ್ಟಿಕೊಂಡು ಹೋರಾಟ ಮಾಡಿದ್ದೇವೆ. ಪರಿಣಾಮ ಮೊದಲ ಬಾರಿಗೆ ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು ಮತ್ತು ಮಳವಳ್ಳಿಯಲ್ಲಿ ಬಿಜೆಪಿಗೆ ಮತಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ಆಡಳಿತ ವಿರೋಧ ಅಲೆ

ಆದರೆ, ಮಂಡ್ಯದಲ್ಲಿ ಮಾತ್ರವಲ್ಲ ಕರ್ನಾಟಕದಲ್ಲೇ ಆಡಳಿತ ವಿರೋಧಿ ಅಲೆ ಮತ್ತು ಕಾಂಗ್ರೆಸ್ ಅಲೆ ಹೆಚ್ಚಾಗಿದ್ದರಿಂದ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ. ಹಾಗಾಗಿ ಪಕ್ಷಕ್ಕೆ ಆಗಿರುವ ಸೋಲನ್ನು ಒಪ್ಪಿಕೊಂಡು, ಆತ್ಮಾವಲೋಕನದ ಜೊತೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಳ್ಳುತ್ತೇವೆ ಎಂದಿದ್ದಾರೆ ಸುಮಲತಾ. ಮಾರ್ಚ್ 10 ರಂದು ನಾನು ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ‘ನಾನು ರಿಸ್ಕ್ ತಗೆದುಕೊಳ್ಳುತ್ತಿದ್ದೇನೆ. ಇದು ರಿಸ್ಕ್ ಎಂದು ನನಗೆ ಗೊತ್ತಿದೆ’ ಎಂದು ಮಾಧ್ಯಮಗಳ ಮುಂದೆಯೇ ಅವತ್ತೆ ಸ್ಪಷ್ಟ ಪಡಿಸಿದ್ದೆ. ಪಕ್ಷದ ಸೋಲಿಗೆ ಇಷ್ಟೆಲ್ಲ ಕಾರಣಗಳು ಇದ್ದರೂ, ನೀವು ನಿಮ್ಮದೇ ಆದ ರೀತಿಯಲ್ಲಿ ಲೆಕ್ಕಾಚಾರ ಹಾಕುತ್ತೀದ್ದೀರಿ. ಸುಳ್ಳು ಸಂದೇಶಗಳನ್ನು ಹರಡುತ್ತಿದ್ದೀರಿ. ನೀವೇ ಸುದ್ದಿಯನ್ನು ಸೃಷ್ಟಿಸಿ ಜನರಿಗೆ ತಪ್ಪು ಮಾಹಿತಿಯನ್ನು ನೀಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಮಂಡ್ಯದಲ್ಲಿ BJP ಸೋಲಿಗೆ ನೀವೇ ಕಾರಣ’ ಎಂದವರಿಗೆ ಸುಮಲತಾ ಖಡಕ್​​ ಉತ್ತರ; ಏನಂದ್ರು..?

https://newsfirstlive.com/wp-content/uploads/2023/05/Sumalatha-Ambarish-1.jpg

Load More