newsfirstkannada.com

ಮಂಡ್ಯ ಇನ್ನೂ ಸಸ್ಪೆನ್ಸ್‌.. ಜೆ.ಪಿ ನಡ್ಡಾ ಭೇಟಿ ಬಳಿಕ ಸುಮಲತಾ ಕೊಟ್ರು ಹೊಸ ಟ್ವಿಸ್ಟ್‌!

Share :

Published March 18, 2024 at 4:17pm

Update March 18, 2024 at 4:26pm

    ಮಂಡ್ಯ ಬೇಕು.. ಆದರೆ ಬಿಜೆಪಿಯಿಂದ ದೂರ ಹೋಗೋ ಪ್ರಶ್ನೆಯೇ ಇಲ್ಲ!

    ಇಂದು ಸಂಜೆ ಅಮಿತ್ ಶಾ ಜೊತೆ ಮತ್ತೊಂದು ಸುತ್ತಿನ ಸಭೆ ಬಳಿಕ ನಿರ್ಧಾರ

    ಮಂಡ್ಯದ ಟಿಕೆಟ್ ವಿಚಾರ ಇನ್ನೂ ಫೈನಲ್ ಹಂತಕ್ಕೆ ಬಂದಿಲ್ಲ- ಸುಮಲತಾ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಈ ಬಾರಿ ಸ್ಪರ್ಧಿಸುವವರು ಯಾರು ಅನ್ನೋದು ಈಗಲೂ ರಣರೋಚಕವಾಗಿದೆ. ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆಯಲ್ಲಿ ಮಂಡ್ಯ ಕ್ಷೇತ್ರ ಜೆಡಿಎಸ್‍ಗೆ ನೀಡುವುದು ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ. ಆದರೆ, ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣೆಯ ಚರ್ಚೆಯ ಹಿನ್ನೆಲೆಯಲ್ಲಿ ಸಂಸದೆ ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿತ್ತು. ಕೂಡಲೇ ದೆಹಲಿಗೆ ಬರಬೇಕೆಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಸಂಸದೆ ಸುಮಲತಾ ಅವರು ದೆಹಲಿಗೆ ಬಂದಿದ್ದಾರೆ. ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಇದನ್ನು ಓದಿ: ರಸ್ತೆಯಲ್ಲಿ ಮಲಗಿದ್ದ ಕರುವಿನ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಚಾಲಕ.. ಮೂಕ ಪ್ರಾಣಿ ನರಳಾಟ!

ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಒಂದು ಸುದೀರ್ಘವಾದ ಚರ್ಚೆ ನಡೆಯಿತು. ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಜೊತೆ ಮಾತುಕತೆ ಮುಕ್ತಾಯವಾಗಿದೆ. ಮಂಡ್ಯದ ಬಗ್ಗೆ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಕ್ಷೇತ್ರದಿಂದಲೇ ಟಿಕೆಟ್​ ಕೊಡಲು ನಾನು ಕೇಳಿದ್ದೇನೆ. ಇಂದು ಸಂಜೆ ಸಭೆ ನಡೆಯಲಿದೆ. ಈ ಸಭೆಯ ನಂತರ ನಿರ್ಧಾರವಾಗಲಿದೆ. ಮೋದಿಯವರು ನನಗೆ ಭರವಸೆ ನೀಡಿದ್ದಾರೆ. ನಿಮ್ಮನ್ನ ಮತ್ತು ನಿಮ್ಮ ಕಾರ್ಯಕರ್ತರನ್ನ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ ಎಂದು ಭರವಸೆ‌ ನೀಡಿದ್ದಾರೆ. ನನ್ನ ಮುಂದಿನ ನಿರ್ಧಾರವನ್ನ ಕ್ಷೇತ್ರಕ್ಕೆ ತೆರಳಿ ನಮ್ಮ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ. ನನ್ನ ಸಂಸತ್ ಅವಧಿ ಮುಕ್ತಾಯದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೆನೆ ಎಂದರು.

ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ನಿಶ್ಚಿಂತೆಯಾಗಿರಿ ಏನೂ ನಿರ್ಧಾರ ಆಗಿಲ್ಲ ಎಂದು ಜೆ.ಪಿ ನಡ್ಡಾ ಅವರೇ ಹೇಳಿದ್ದಾರೆ. ನಿಮ್ಮಂತಹ ನಾಯಕಿ ಬಿಜೆಪಿ ಪಕ್ಷಕ್ಕೆ ಬೇಕು. ಇಂದು ಮತ್ತೊಂದು ಸಭೆ ನಡೆಯಲಿದ್ದು, ಮಂಡ್ಯ ಬಗ್ಗೆ ಫೈನಲ್ ನಿರ್ಧಾರ ತಿಳಿಸುತ್ತೇವೆ ಎಂದು ನಡ್ಡಾ ಹೇಳಿದ್ದಾರೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

ಇನ್ನು, ನಾನು ಸ್ಪರ್ಧೆ ಮಾಡಬೇಕು ಅನ್ನೋದಕ್ಕಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧೆ ಮಾಡಬೇಕು. ಸ್ಪರ್ಧೆ ಮಾಡಿದ್ರೆ ಮಂಡ್ಯದಲ್ಲಿ ಬಿಜೆಪಿ ಬೇಸ್ ಉಳಿಯುತ್ತೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರ ಊಹಾಪೋಹ. ಯಾವ ಕ್ಷೇತ್ರ ಖಾಲಿ ಇರುತ್ತೆ ಅಲ್ಲಿ ನನ್ನ ಹೆಸರು ಜೋಡಿಸ್ತಿದ್ದಾರೆ. ಕಳೆದ ಬಾರಿ ಪಕ್ಷೇತರರವಾಗಿ ನಿಲ್ಲಿ ಎಂದು ಅಭಿಮಾನಿಗಳು ಹೇಳಿದ್ರು. ಮುಂದೆ ಯಾವುದೇ ನಿರ್ಧಾರ ಮಾಡುವುದಿದ್ದರೆ ಅವರನ್ನೇ ಕೇಳುತ್ತೇನೆ. ಮಂಡ್ಯದಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆ ಮಾಡ್ತಿವಿ ಅನ್ನೋದು ಸಹಜ. ಇಂದು ಬಿಜೆಪಿ ಹೈಕಮಾಂಡ್ ಏನ್ ನಿರ್ಧಾರ ಮಾಡುತ್ತೆ ಅದನ್ನು ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ ಎಂದು ಸುಮಲತಾ ತಿಳಿಸಿದ್ದಾರೆ.

ನನ್ನನ್ನು ಸಂಧಾನ ಮಾಡುವ ಪ್ರಯತ್ನ ಇಂದು ಆಗಿಲ್ಲ. ನಾಳೆ ಮಂಡ್ಯಕ್ಕೆ ಹೋಗಿ ಬೆಂಬಲಿಗರೊಂದಿಗೆ ಮಾತನಾಡುತ್ತೇನೆ. ಕಾರ್ಯಕರ್ತರನ್ನು ಬಿಟ್ಟು ಕೊಟ್ಟು ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದಿದ್ದೇನೆ. ನಿಮ್ಮ ಬೆಂಬಲಿಗರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ. ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಅಮಿತ್ ಶಾ ಅವರ ಭೇಟಿ ಮಾಡೊಕೆ ಹೇಳಿದ್ದಾರೆ. ನಾಳೆಯೊಳಗೆ ಟೈಂ ಸಿಕ್ಕರೆ ಭೇಟಿ ಮಾಡುತ್ತೇನೆ. ಏನೇ ಆಗಲಿ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಡ್ಯ ಇನ್ನೂ ಸಸ್ಪೆನ್ಸ್‌.. ಜೆ.ಪಿ ನಡ್ಡಾ ಭೇಟಿ ಬಳಿಕ ಸುಮಲತಾ ಕೊಟ್ರು ಹೊಸ ಟ್ವಿಸ್ಟ್‌!

https://newsfirstlive.com/wp-content/uploads/2024/03/sumalatha-ambrish.jpg

Load More