ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಸುಮೋಟೋ ಕೇಸ್ ದಾಖಲು.. ಕಾರಣವೇನು..?

author-image
Veena Gangani
Updated On
ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಸುಮೋಟೋ ಕೇಸ್ ದಾಖಲು.. ಕಾರಣವೇನು..?
Advertisment
  • ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್​​ ಜಾರಕಿಹೊಳಿ
  • ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರನಿಂದ ಫೈರಿಂಗ್
  • ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೋ ವೈರಲ್

ಬೆಳಗಾವಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.
ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ರಾಮಾಯಣದಲ್ಲಿ ಯಶ್​ ರಾವಣ ಆದ್ರೆ.. ಹನುಮಾನ್, ಲಕ್ಷ್ಮಣ, ಸೂರ್ಪನಕಿ ಪಾತ್ರ ಮಾಡ್ತಿರೋದು ಯಾರು?

publive-image

ಬೆಳಗಾವಿ ಜಿಲ್ಲೆಯ ಗೋಕಾಕ್​ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಜಾತ್ರೆಯಲ್ಲಿ ನೂರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಹೀಗಾಗಿ ರಮೇಶ್​​ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment