newsfirstkannada.com

VIDEO: ಅಯೋಧ್ಯೆಗೆ ಬಂದಿಳಿದ ಸೂಪರ್​ ಸ್ಟಾರ್​ ರಜನಿಕಾಂತ್​​!

Share :

Published January 21, 2024 at 7:33pm

Update January 21, 2024 at 7:35pm

  ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆಗೆ ಸಿನಿಮಾ ಸ್ಟಾರ್​​ಗಳ ದಂಡು

  ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗೆ ಕೇವಲ 12 ಗಂಟೆ ಬಾಕಿ

  ವಿಶೇಷ ಮುಹೂರ್ತದಲ್ಲಿ ನಡೆಯಲಿದೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ

ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಅವರು ರಾಮಮಂದಿರದ ಉದ್ಘಾಟನೆ ಮಾಡಲಿದ್ದಾರೆ. ಹೀಗಾಗಿ ರಾಮ ಮಂದಿರಕ್ಕೆ ಅನೇಕ ಸ್ಟಾರ್​ ನಟ ನಟಿಯರು ಆಗಮಿಸುತ್ತಿದ್ದಾರೆ. ಈಗ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೂಪರ್ ಸ್ಟಾರ್ ರಜನಿಕಾಂತ್ ತೆರಳಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಇದರ ನಡುವೆ ಕನ್ನಡದ ನಟ-ನಟಿಯರು, ಬಾಲಿವುಡ್ ಚಿತ್ರರಂಗದ ಖ್ಯಾತ ಕಲಾವಿದರಿಗೆ ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲು ಆಹ್ವಾನ ನೀಡಲಾಗಿತ್ತು. ಅದರಂತೆ ಸೂಪರ್​ ಸ್ಟಾರ್​​ ರಜನಿಕಾಂತ್​ ಅವರಿಗೂ ಕೂಡ ವಿಶೇಷ ಆಹ್ವಾನ ನೀಡಲಾಗಿತ್ತು. ಈಗ ನಟ ರಜನಿಕಾಂತ್​ ಹಾಗೂ ನಟ ಧನುಷ್ ಕೂಡ ಚೆನ್ನೈನಿಂದ ಅಯೋಧ್ಯೆಗೆ ಬಂದಿಳಿದಿದ್ದಾರೆ.

ಇದನ್ನು ಓದಿ: ಎಲ್ಲೆಲ್ಲೂ ರಾಮನದ್ದೇ ಜಪ.. ರಾಮಲಲ್ಲಾ ಪ್ರತಿಷ್ಠಾಪನೆಗೆ ಕೈ ಜೋಡಿಸಿದ ಮುಸ್ಲಿಮರು!

ಸದ್ಯ ನಾಳೆ ಬೆಳಗ್ಗೆ 10.55ಕ್ಕೆ ಶ್ರೀರಾಮ ಜನ್ಮಭೂಮಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಬಳಿಕ ಮಧ್ಯಾಹ್ನ 12.05ರಿಂದ 12.55ಕ್ಕೆ ಪ್ರಾಣ ಪ್ರತಿಷ್ಠಾನ ಕಾರ್ಯದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 12.55ಕ್ಕೆ ಪೂಜಾ ಸ್ಥಳದಿಂದ ಪ್ರಧಾನಿ ಮೋದಿ ನಿರ್ಗಮಿಸಿ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ನಂತರ 1.02ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಿ 2.10ಕ್ಕೆ ಕುಬೇರ್ ತಿಲಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಶಿವನಿಗೆ ಪೂಜೆ ಸಲ್ಲಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಅಯೋಧ್ಯೆಗೆ ಬಂದಿಳಿದ ಸೂಪರ್​ ಸ್ಟಾರ್​ ರಜನಿಕಾಂತ್​​!

https://newsfirstlive.com/wp-content/uploads/2024/01/rajani-13.jpg

Load More