ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ರಜಿನಿಕಾಂತ್ ವಿಶೇಷ ಪೂಜೆ
‘ಭಜರಂಗಿ’ ದರ್ಶನದ ಬಳಿಕ ಸಂತಸ ವ್ಯಕ್ತಪಡಿಸಿದ ಸೂಪರ್ ಸ್ಟಾರ್
ಯೋಗಿ ಆದಿತ್ಯನಾಥ್ ಭೇಟಿ ಬಳಿಕ ಅಖಿಲೇಶ್ ಯಾದವ್ ಜೊತೆ ಚರ್ಚೆ
ಅಯೋಧ್ಯೆ: ಉತ್ತರ ಭಾರತದ ಪ್ರವಾಸದಲ್ಲಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ತಮ್ಮ ಟೆಂಪಲ್ ರನ್ ಮುಂದುವರಿಸಿದ್ದಾರೆ. ಇವತ್ತು ಅಯೋಧ್ಯೆಗೆ ಭೇಟಿ ಕೊಟ್ಟ ರಜಿನಿಕಾಂತ್ ಅವರು ಪ್ರಸಿದ್ಧ ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಿಳಿ ಬಣ್ಣದ ಕುರ್ತಾ ಧರಿಸಿ ಸಾಮಾನ್ಯರಲ್ಲಿ ಸಾಮಾನ್ಯ ಭಕ್ತರಂತೆ ಆಗಮಿಸಿದ ರಜಿನಿಕಾಂತ್ ಹನುಮನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿದ ರಜಿನಿ, ಬಹಳ ದಿನಗಳಿಂದ ಈ ದೇವಸ್ಥಾನಕ್ಕೆ ಭೇಟಿ ನೀಡುವ ನನ್ನ ಆಸೆ ಈಡೇರಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಉತ್ತರ ಭಾರತದಲ್ಲೇ ವಾಸ್ತವ್ಯ ಹೂಡಿರುವ ಸೂಪರ್‌ಸ್ಟಾರ್ ರಜಿನಿಕಾಂತ್ ಹಲವು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಉತ್ತರಾಖಂಡ್‌ನ ಬದರಿನಾಥ ದೇವಾಲಯಕ್ಕೆ ಯಾತ್ರೆ ಕೈಗೊಂಡಿದ್ದ ರಜಿನಿ, ಹಿಮಾಲಯದ ಗುಹೆಯಲ್ಲಿ ಧ್ಯಾನ ಕೂಡ ಮಾಡಿದ್ದರು. ಈ ಪ್ರವಾಸದ ಮಧ್ಯೆ ಉತ್ತರಪ್ರದೇಶಕ್ಕೂ ಭೇಟಿ ನೀಡಿದ್ದು ಐತಿಹಾಸಿಕ ಪ್ರಸಿದ್ಧ ದೇವಾಲಯಗಳ ದರ್ಶನ ಮಾಡುತ್ತಿದ್ದಾರೆ. ಈ ಟೆಂಪಲ್ ರನ್ ಜೊತೆಗೆ ರಜಿನಿಕಾಂತ್ ಅವರು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಸಿಎಂ ಯೋಗಿ ಆದಿತ್ಯನಾಥ್ ಕಾಲು ಮುಟ್ಟಿ ನಮಸ್ಕರಿಸಿದ ರಜಿನಿಕಾಂತ್.. ಭಾರೀ ಚರ್ಚೆ
ಇತ್ತೀಚೆಗೆ ಬಿಡುಗಡೆಯಾಗಿರುವ ರಜಿನಿಕಾಂತ್ ಅವರ ಜೈಲರ್ ಸಿನಿಮಾ ದೇಶಾದ್ಯಂತ ಸದ್ದು ಮಾಡಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ಜೈಲರ್ ಸಿನಿಮಾ ವೀಕ್ಷಿಸಲಿದ್ದಾರೆ ಎನ್ನಲಾಗಿತ್ತು. ಈ ಹಿನ್ನೆಲೆ ಲಕ್ನೋಗೆ ಆಗಮಿಸಿದ್ದ ರಜಿನಿಕಾಂತ್ ಅವರು ನಿನ್ನೆಯಷ್ಟೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ರು. ಯೋಗಿ ಅವರನ್ನು ಭೇಟಿಯಾದ ಕೂಡಲೇ ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಅಭಿಮಾನಿಗಳ ತಲೈವಾ ಸಿಎಂ ಯೋಗಿ ಆದಿತ್ಯನಾಥ್ ಜೊತೆ ಮಹತ್ವದ ಚರ್ಚೆ ನಡೆಸಿ ಬಂದಿದ್ದರು. ಡಿಸಿಎಂ ಕೇಶವ ಪ್ರಸಾದ್ ಮೌರ್ಯ ಜೊತೆ ರಜಿನಿಕಾಂತ್ ಉತ್ತರ ಪ್ರದೇಶದಲ್ಲಿ ಜೈಲರ್ ಸಿನಿಮಾ ವೀಕ್ಷಿಸಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ