/newsfirstlive-kannada/media/post_attachments/wp-content/uploads/2024/05/PRAJWAL_REVANNA_2.jpg)
ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಜೈಲೇ ಗತಿಯಾಗಿದೆ. ಸುಪ್ರೀಂಕೋರ್ಟ್​ನಲ್ಲಿಯೂ ಕೂಡ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾಮೀನು ಕೋರಿ ಮೇಲ್ಮನವಿ ಸಲ್ಲಿಸಿದ್ದ ಪ್ರಜ್ವಲ್ ರೇವಣ್ಣ ಅವರ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್​ ಜಾಮೀನು ನೀಡಲು ನಿರಾಕರಿಸಿದೆ.
ಮಹಿಳೆಯ ಮೇಲೆ ಅನಾಚಾರ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣಗೆ ಅಕ್ಟೋಬರ್ 21 ರಂದು ಹೈಕೋರ್ಟ್​ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ ಮೆಟ್ಟಿಲು ಏರಿದ್ದರು ಪ್ರಜ್ವಲ್ ರೇವಣ್ಣ. 1 ಪ್ರಕರಣದಲ್ಲಿ ಬೇಲ್​ ಹಾಗೂ ಇನ್ನೆರಡರಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೊಳೆನರಸೀಪುರ ಠಾಣೆಯಲ್ಲಿನ ದಾಖಲಾದ ಪ್ರಕರಣಕ್ಕೆ ಜಾಮೀನು ಕೋರಿದ್ದರು. ಸಿಐಡಿ ಸೈಬರ್​ ಸೆಲ್​ನಲ್ಲಿದ್ದ ಕೇಸ್​ಗಳಿಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದ್ರೆ ಕರ್ನಾಟಕ ಹೈಕೋರ್ಟ್​​ನಲ್ಲಿ ಅರ್ಜಿ ವಜಾಗೊಂಡಿತ್ತು
ಏನಿದು ಪ್ರಜ್ವಲ್ ರೇವಣ್ಣ ಮೇಲಿರುವ ಕೇಸ್​?
ಏಪ್ರಿಲ್ 28 ರಂದು ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆ ದಾಖಲಿಸಿದ್ದ ದೂರಿನನ್ವಯ ಕೇಸ್ ದಾಖಲಾಗಿತ್ತು. 2015ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ತಂದೆ ಹಾಗೂ ಮಗನ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹೊಳೆ ನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲಿ ರೇವಣ್ಣ ಎ1, ಪ್ರಜ್ವಲ್​ ಎ2ಗಳನ್ನಾಗಿ ಮಾಡಲಾಗಿತ್ತು. ಸೆಕ್ಷನ್ 354ಎ, 354ಡಿ, 509 ಅಡಿ ಪ್ರಕರಣವನ್ನು ದಾಖಲಿಸಿದ್ದರು ಪೊಲೀಸರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us