newsfirstkannada.com

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿದಾರನಿಗೆ 1 ಲಕ್ಷ ರೂ ದಂಡ..!

Share :

Published January 19, 2024 at 2:29pm

Update January 19, 2024 at 2:33pm

  ರಾಹುಲ್ ಗಾಂಧಿ ವಿರುದ್ಧದ ಮೋದಿ ಸರ್​ ನೇಮ್ ಕೇಸ್

  ಸುಪ್ರೀಂ ಕೊರ್ಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ

  ಅಶೋಕ್ ಪಾಂಡೆ ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಮರುಸ್ಥಾಪನೆ ಮಾಡಿರೋದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಾಜಾ ಮಾಡಿದೆ. ಜೊತೆಗೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

‘ಮೋದಿ ಸರ್​​ ನೇಮ್’ ಪ್ರಕರಣದಲ್ಲಿ ಗುಜರಾತ್​ನ ಸೂರತ್ ಕೋರ್ಟ್ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಇದರಿಂದ ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಆದರೆ ಕಳೆದ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್, ಕೆಳ ನ್ಯಾಯಾಲಯದ ತೀರ್ಪಿಗೆ ತಡೆ ನೀಡಿತ್ತು. ಇದರಿಂದ ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವವನ್ನು ವಾಪಸ್ ಪಡೆದಿದ್ದರು.

ಸುಪ್ರೀಂ ಕೋರ್ಟ್ ತಡೆ ನೀಡಿದ್ದನ್ನು ಪ್ರಶ್ನಿಸಿ ಅಶೋಕ್ ಪಾಂಡೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಗೆ ಆಧಾರ ರಹಿತ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್​, 1 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಈ ಹಿಂದೆ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿಯೂ ಹಿನ್ನಡೆ ಅನುಭವಿಸಿದ್ದರು. ಆ ಸಂದರ್ಭದಲ್ಲಿಯೂ ಕೋರ್ಟ್ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿತ್ತು.

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ತೀರ್ಪು ಸೂರತ್ ಕೋರ್ಟ್ ಹೇಳಿತ್ತು. ಜೊತೆಗೆ ಎರಡು ವರ್ಷಗಳ ಜೈಲು ಶಿಕ್ಷೆಯೂ ಪ್ರಕಟವಾಗಿತ್ತು. ಇದರಿಂದ ರಾಹುಲ್ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ನಂತರ ರಾಹುಲ್ ಗುಜರಾತ್ ಹೈಕೋರ್ಟ್‌ಗೆ ಹೋಗಿ ಹಿನ್ನಡೆ ಅನುಭವಿಸಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಗರಿಷ್ಠ ಎರಡು ವರ್ಷಗಳ ಶಿಕ್ಷೆ ವಿಧಿಸಲು ಯಾವುದೇ ಕಾರಣವಿಲ್ಲ. ಅಂತಿಮ ತೀರ್ಪು ನೀಡುವವರೆಗೆ ಶಿಕ್ಷೆಯ ಆದೇಶಕ್ಕೆ ತಡೆ ನೀಡುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾನನಷ್ಟ ಪ್ರಕರಣಕ್ಕೆ ಕಾರಣವೇನು?

ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ಱಲಿಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ್ದ ಅವರು, ‘ಎಲ್ಲಾ ಕಳ್ಳರ ಸರ್​​​​ ನೇಮ್ ಮೋದಿ ಎಂದಿದೆ, ಯಾಕೆ ಅಂತಾ ಪ್ರಶ್ನೆ ಮಾಡಿದ್ದರು. ರಾಹುಲ್ ಗಾಂಧಿಯ ಈ ಹೇಳಿಕೆ ಸಾಕಷ್ಟು ವಿವಾದವನ್ನು ಸೃಷ್ಟಿಸಿತ್ತು. ನಂತರ ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ 2019ರಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿದಾರನಿಗೆ 1 ಲಕ್ಷ ರೂ ದಂಡ..!

https://newsfirstlive.com/wp-content/uploads/2024/01/RAHUL-GANDHI-3.jpg

Load More