/newsfirstlive-kannada/media/post_attachments/wp-content/uploads/2025/02/HDK_COURT.jpg)
ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಫಿಕೇಷನ್ ಕೇಸ್​ನಲ್ಲಿ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿಗೆ ಭಾರೀ ಹಿನ್ನಡೆಯಾಗಿದೆ.. ಸಲ್ಲಿಸಿದ್ದ ಅರ್ಜಿ ವಜಾ ಆಗಿದ್ದು, ಇದು ಕುಮಾರಸ್ವಾಮಿ ನುಂಗಲಾರದ ತುತ್ತಾಗಿದೆ. ಏನಿದು ಪ್ರಕರಣ ಅನ್ನೋ ಡೀಟೇಲ್ಸ್ ಇಲ್ಲಿದೆ.
ಪ್ರೆಸೆಂಟ್ ಸಿಎಂಗೆ ಮುಡಾ ಕೇಸ್​ನಲ್ಲಿ ಸ್ವಲ್ಪ ರಿಲೀಫ್​ ಸಿಕ್ಕಿದ್ರೆ.. ಸದ್ಯ ಮಾಜಿ ಸಿಎಂಗೆ ಹಳೇ ಡಿನೋಟಿಫಿಕೇಷನ್ ಕೇಸ್​ ಒಂದು ತಲೆ ನೋವು ತಂದಿದೆ.. ಕೇಂದ್ರ ಸಚಿವ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ಸದ್ಯ ವಜಾ ಆಗಿ ಮತ್ತೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಸುಪ್ರೀಂಕೋರ್ಟ್​​ ಬಿಗ್ ಶಾಕ್ ಕೊಟ್ಟಿದೆ. ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನ ಹೈಕೋರ್ಟ್​ ರದ್ದುಗೊಳಿಸಿತ್ತು. ಇದನ್ನ ಪ್ರಶ್ನಿಸಿ ಹೆಚ್.ಡಿ ಕುಮಾರಸ್ವಾಮಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ರು. ಆದ್ರೆ, ಇದೀಗ ಸುಪ್ರೀಂಕೋರ್ಟ್​ ಹೆಚ್​​ಡಿಕೆ ಅರ್ಜಿಯನ್ನ ವಜಾಗೊಳಿಸಿ ಆದೇಶ ಹೊರಡಿಸಿದೆ.
ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬನಶಂಕರಿ ಬಳಿಯ ಹಲಗೆವಡೇರಹಳ್ಳಿ ಸರ್ವೇ ನಂಬರ್ 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನ ಕಾನೂನುಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪ ಕೇಳಿಬಂದಿತ್ತು. ಈ ಕುರಿತ ದಾಖಲೆಗಳ ಸಮೇತ ಮಹದೇವಸ್ವಾಮಿ 2012ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಕೇಸ್​ನಲ್ಲಿ ಕುಮಾರಸ್ವಾಮಿ ಜೊತೆಗೆ ಅನೇಕ ಪ್ರಮುಖರು, ಗಣ್ಯರು ಆರೋಪಿತರಾಗಿದ್ದು, ಆದ್ರೆ ಈ ಕೇಸ್​ನಲ್ಲಿ ಲೋಕಾಯುಕ್ತ ಬಿಗ್ ರಿಲೀಫ್​ ಕೊಟ್ಟಿತ್ತು.
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ರು. ಅದನ್ನ ದೂರುದಾರ ಮಹಾದೇವಸ್ವಾಮಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಲೋಕಾಯುಕ್ತ ಪೊಲೀಸರ ಬಿ-ರಿಪೋರ್ಟ್ ತಿರಸ್ಕರಿಸಿ ಪ್ರಕರಣದ ವಿಚಾರಣೆಯನ್ನ ಕೈಗೆತ್ತಿಕೊಂಡಿತ್ತು. ಇದನ್ನ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ರು. ಆದ್ರೆ, ಇದೀಗ ಸುಪ್ರೀಂಕೋರ್ಟ್​ ಹೆಚ್​​ಡಿಕೆ ಅರ್ಜಿಯನ್ನ ವಜಾಗೊಳಿಸಿದೆ.
ಸುಪ್ರೀಂಕೋರ್ಟ್ ಕೊಟ್ಟ ಆದೇಶ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ.. ಈ ಕೇಸ್​ನಲ್ಲಿ ಅವರ ಮುಂದಿನ ನಡೆದ ಏನು ಅನ್ನೋದನ್ನ ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us