/newsfirstlive-kannada/media/post_attachments/wp-content/uploads/2025/07/DARSHAN_SMILE.jpg)
ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಬೇಲ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಗುರುವಾರದ ತನಕ ನಟನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ವಕೀಲ ಕಪಿಲ್ ಸಿಬಲ್ ಬದಲಿಗೆ ಸಿದ್ದಾರ್ಥ್ ದಾವೆ ವಾದ ಮಂಡಿಸಲು ಕೋರ್ಟ್ಗೆ ಹಾಜರಿದ್ದರು. ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ಸಿದ್ದಾರ್ಥ್ ದಾವೆ ಅವರು ವಾದ ಮಾಡಲು ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ಗುರುವಾರದ ವರೆಗೆ ಕೋರ್ಟ್, ಸಮಯ ನೀಡಿದೆ. ಜುಲೈ 24 ರಂದು ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಹಾಗೂ ನ್ಯಾಯಮೂರ್ತಿ ಮಹದೇವನ್ ನೇತೃತ್ವದ ದ್ವಿಸದಸ್ಯ ಪೀಠವು ಇವತ್ತು ವಿಚಾರಣೆ ಮುಂದುವರಿಸಲಿದೆ. ಈಗಾಗಲೇ ಸರ್ಕಾರಿ ಪರ ವಕೀಲರ ವಾದ ಮುಗಿದಿದ್ದು, ದರ್ಶನ್ ಪರ ಖ್ಯಾತ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಬೇಕಿತ್ತು.
ಇದನ್ನೂ ಓದಿ: ನಟ ದರ್ಶನ್ ಪಾಲಿಗೆ ಇವತ್ತು ಬಿಗ್ ಡೇ.. ಮೊನ್ನೆ ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?
ಸುಪ್ರೀಂ ಕೋರ್ಟ್ನಲ್ಲಿ ಕಳೆದ ವಾರ ನಡೆದ ವಿಚಾರಣೆ ವೇಳೆ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿದೆ. ನಮಗೆ ಪೊಲೀಸರು ನೀಡಿರುವ ಸಾಕ್ಷ್ಯಗಳು ತೃಪ್ತಿ ತಂದಿವೆ. ಆದ್ರೆ ಜಾಮೀನು ನೀಡಲು ಹೈಕೋರ್ಟ್ ನೀಡಿರುವ ಕಾರಣಗಳು ಸಮಂಜಸವಾಗಿಲ್ಲ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಎದ್ದು ಕಾಣುತ್ತಿದೆ. ಬೇಲ್ ನೀಡಲು ಯಾವುದಾದ್ರೂ ಒಂದು ಅಂಶ ಸಿಗಲಿ ಎನ್ನುವ ಚಡಪಡಿಕೆ ಕಾಣುತ್ತಿದೆ. ಈ ವಿಷ್ಯದಲ್ಲಿ ಹೈಕೋರ್ಟ್ ತನ್ನ ವಿವೇಚನೆ ಸೂಕ್ತವಾಗಿ ಬಳಸಿಲ್ಲ.. ಆದ್ದರಿಂದ ನಟ ದರ್ಶನ್ ಅವರ ಜಾಮೀನಿನ ವಿಷ್ಯದಲ್ಲಿ ನಾವೇಕೆ ಮಧ್ಯಪ್ರವೇಶ ಮಾಡಬಾರದೆಂದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ದರ್ಶನ್ ಜಾಮೀನು ಭವಿಷ್ಯ ತುಂಬಾನೇ ಕುತೂಹಲ ಮೂಡಿಸಿದೆ.
ಇದನ್ನೂ ಓದಿ: ಮಕ್ಕಳಿಗೆ ಬೇಕರಿ ಫುಡ್ ಕೊಡುವ ಮುನ್ನ ಇರಲಿ ಎಚ್ಚರ.. ಮಂಡ್ಯದಲ್ಲಿ ಏನಾಗಿದೆ ನೋಡಿ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ