/newsfirstlive-kannada/media/post_attachments/wp-content/uploads/2025/07/darshan-bail-case-in-supreme-court.jpg)
ನಟ ದರ್ಶನ್‌ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವಾದ-ಪ್ರತಿವಾದವನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ. ರೇಣುಕಾಸ್ವಾಮಿ ಕೇಸ್‌ನಲ್ಲಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಪವಿತ್ರಾ ಗೌಡ A1, ದರ್ಶನ್ A2, ಪ್ರದೂಷ್ A14, ಲಕ್ಷ್ಮಣ್ A12, ನಾಗರಾಜ್ A11, ಅನುಕುಮಾರ್ A7, ಜಗದೀಶ್ A6 ಈ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್ ಮೆಟ್ಟಿಲೇರಿತ್ತು.
ಏನಿದು ಪ್ರಕರಣ..?
ಚಿತ್ರದುರ್ಗದ ವ್ಯಕ್ತಿ ರೇಣುಕಾಸ್ವಾಮಿ ದರ್ಶನ್ ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರಹಿಂಸೆ ಕೊಟ್ಟು 2024 ಜೂನ್ 8ರಂದು ಭೀಕರವಾಗಿ ಹ*ತ್ಯೆ ಮಾಡಲಾಗಿತ್ತು. ಇದೇ ಕೇಸ್ ಸಂಬಂಧ ಜೂನ್ 11ರಂದು ನಟ ದರ್ಶನ್ ಹಾಗೂ ಪವಿತ್ರಾ ಗೌಡರನ್ನು ಬಂಧಿಸಿದ್ದರು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಆರೋಪಿಗಳಿಗೆ ಜೈಲು ಶಿಕ್ಷೆ ನೀಡಲಾಗಿತ್ತು. ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಫೋಟೋ ವೈರಲ್ ಆಗಿತ್ತು. ಹೀಗಾಗಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶ ನೀಡಿತ್ತು.
ನಂತರ ಅಕ್ಟೋಬರ್ 30ರಂದು ಅನಾರೋಗ್ಯ ಹಿನ್ನೆಲೆಯಲ್ಲಿ ದರ್ಶನ್‌ಗೆ ಮೆಡಿಕಲ್ ಬೇಲ್ ನೀಡಲಾಗಿತ್ತು. ಮತ್ತೆ ಡಿಸೆಂಬರ್ 13ರಂದು ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ರೆಗ್ಯುಲರ್ ಬೇಲ್ ನೀಡಲಾಗಿತ್ತು. 2025 ಜನವರಿ 07ರಂದು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಜುಲೈ 17ರಂದು ಹೈಕೋರ್ಟ್ ಬೇಲ್ ನಡೆಗೆ ಸುಪ್ರೀಂಕೋರ್ಟ್ ಅಸಮಧಾನ ಹೊರ ಹಾಕಿತ್ತು. ಮತ್ತೆ ದರ್ಶನ್ ಪರ ವಕೀಲ ಸಿದ್ಧಾರ್ಥ್ ದವೆ ಅವರು ಜುಲೈ 22ಕ್ಕೆ ಸಮಯ ಕೇಳಿದ್ದಕ್ಕೆ ಮುಂದೂಡಿಕೆ ಮಾಡಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ