/newsfirstlive-kannada/media/post_attachments/wp-content/uploads/2025/07/SUPREME-COURT.jpg)
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಾಜ್ಯ ಪೊಲೀಸ್ ಇಲಾಖೆಯ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಿತು. ಜಸ್ಟೀಸ್ ಜೆ.ಬಿ.ಪರ್ದಿವಾಲಾ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು. ವಾದಿ ಮತ್ತು ಪ್ರತಿವಾದಿಗಳಿಬ್ಬರ ಪರ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ಉಪಸ್ಥಿತರಿದ್ದು ವಾದ ಮಂಡನೆ ಮಾಡಿದ್ದರು.
ಇದನ್ನೂ ಓದಿ: RCB ಕಾಲ್ತುಳಿತ ದುರಂತಕ್ಕೆ ಕಾರಣ ಕೊಟ್ಟ ಸರ್ಕಾರ; ಹೈಕೋರ್ಟ್ಗೆ ತನಿಖಾ ವರದಿ ಸಲ್ಲಿಕೆ..! ಅದರಲ್ಲಿ ಏನಿದೆ..?
ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನು ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಹೈಕೋರ್ಟ್ ಆದೇಶವನ್ನು ಹೇಗೆ ನೀಡಿದೆ ಎನ್ನುವುದನ್ನು ನೀವು ಗಮನಿಸಿರಬಹುದು ಎಂದು ಸಿಬಲ್ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ಹೈಕೋರ್ಟ್, ನಟ ದರ್ಶನ್ ಹಾಗೂ ಉಳಿದವರಿಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಅತೃಪ್ತಿ, ಅಸಮಾಧಾನ ವ್ಯಕ್ತಪಡಿಸಿದೆ.
ಜುಲೈ 22ರಂದು ವಿಸ್ತೃತವಾಗಿ ಪ್ರಕರಣವನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ನ್ಯಾಯಪೀಠ ತಿಳಿಸಿದೆ. ಎರಡೂ ಕಡೆಯ ವಕೀಲರಿಗೆ ವಾದಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಹೀಗಾಗಿ ಜುಲೈ 22 ರಂದು ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ಮುಂದುವರಿಯುತ್ತಾ ಇಲ್ಲವೇ ಮತ್ತೆ ನಟ ದರ್ಶನ್ ಜೈಲು ಪಾಲಾಗಬೇಕಾಗುತ್ತಾ ಎಂಬುದು ನಿರ್ಧಾರವಾಗಲಿದೆ.
ಇದನ್ನೂ ಓದಿ: ಷರಿಯಾ ಕಾನೂನಿನಲ್ಲಿ ಬ್ಲಡ್ ಮನಿ ಹೇಗೆ ಕೆಲಸ ಮಾಡ್ತದೆ..? ಈ ಹಿಂದೆ ಕೇರಳದ ವ್ಯಕ್ತಿಯೊಬ್ಬ ಶಿಕ್ಷೆಯಿಂದ ಪಾರಾಗಿದ್ದ..!
ಹೈಕೋರ್ಟ್ ಜಾಮೀನು ಆದೇಶದ ಪ್ರತಿಯನ್ನು ಸಂಪೂರ್ಣವಾಗಿ ಸುಪ್ರೀಂ ಕೋರ್ಟ್ನ ಜಡ್ಜ್ ಜೆ.ಬಿ.ಪರ್ದಿವಾಲಾ ಅವರು ಓದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್, ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿಲ್ಲ ಎಂದು ಇಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದು ನಟ ದರ್ಶನ್ ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳು ಮತ್ತೆ ಜೈಲು ಪಾಲಾಗ್ತಾರಾ ಇಲ್ಲವೇ ಎಂಬುವುದಕ್ಕೆ ಜುಲೈ 22 ರವರೆಗೂ ಕಾಯಬೇಕು.
ಸುಪ್ರೀಂ ಕೋರ್ಟ್ನಲ್ಲಿ ವಾದ- ಪ್ರತಿವಾದದ ಬಳಿಕ ಮಾತನಾಡಿದ ಸರ್ಕಾರಿ ವಕೀಲ ಅನಿಲ್ ನಿಶಾನಿ ಅವರು, ನಾವು ಸುಪ್ರೀಂ ಕೋರ್ಟ್ಗೆ ಕೊಟ್ಟಿರುವ ದಾಖಲೆಯನ್ನು ಕೋರ್ಟ್ ಪರಿಶೀಲನೆ ಮಾಡಿದೆ. ದರ್ಶನ್ ಅವರ ಇತರೆ ಕ್ರೈಮ್ಗಳ ಬಗ್ಗೆಯೂ ದಾಖಲೆ ನೀಡಿದ್ದೇವೆ. ಜೊತೆಗೆ ಜೈಲಿನಲ್ಲಿ ಮಾಡಿರುವ ಬೇರೆ ಚಟುವಟಿಕೆಗಳ ಬಗ್ಗೆಯೂ ದಾಖಲೆ ಕೊಟ್ಟಿದ್ದೇವೆ. ಹೈಕೋರ್ಟ್ ಬೇಲ್ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೊನೆಗೂ ಮದುವೆಗೆ ಸಜ್ಜಾದ ಅನುಶ್ರೀ.. ಮುಹೂರ್ತ ಫಿಕ್ಸ್, ಹುಡುಗ ಯಾರು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ