ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರ ಮಾಡಿಕೊಂಡ ಎಡವಟ್ಟು ಏನು? ದಂಡ ಯಾಕೆ?
ಸುಪ್ರೀಂಕೋರ್ಟ್ ಜಸ್ಟೀಸ್ ಬಿ.ಆರ್ ಗವಾಯಿ ಮಹತ್ವದ ಆದೇಶ
ನವದೆಹಲಿ: ಈ ಸುದ್ದಿ ಓದಿದ್ರೆ ಹೀಗೂ ಆಗುತ್ತಾ ಅಂತಾ ಅನ್ನಿಸದೇ ಇರೋದಿಲ್ಲ. ಹೈಕೋರ್ಟ್ ಆದೇಶದ ಬಳಿಕವೂ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದಕ್ಕೆ ಸುಪ್ರೀಂಕೋರ್ಟ್ ಗರಂ ಆಗಿದೆ. ಅಷ್ಟೇ ಅಲ್ಲ ಸುಪ್ರೀಂಕೋರ್ಟ್ ಜಸ್ಟೀಸ್ ಬಿ.ಆರ್ ಗವಾಯಿ ಅವರಿದ್ದ ಪೀಠ ಕರ್ನಾಟಕ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡವನ್ನು ಹಾಕಿದೆ.
ಇದನ್ನೂ ಓದಿ: 68ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಸುಪ್ರೀಂಕೋರ್ಟ್ನ ಹಿರಿಯ ವಕೀಲ.. ವಿವಾಹ ಸಮಾರಂಭ ನಡೆದಿದ್ದೇಲ್ಲಿ?
ಭೂಮಿ ಸ್ವಾಧೀನಪಡಿಸಿಕೊಂಡು ಮಾಲೀಕರಿಗೆ ಸೂಕ್ತ ಪರಿಹಾರ ನೀಡದ ಪ್ರಕರಣ ಇದಾಗಿದೆ. ಕರ್ನಾಟಕ ಹೈಕೋರ್ಟ್ ಭೂಮಾಲೀಕರಿಗೆ ಪರಿಹಾರ ನೀಡಲು ಆದೇಶಿಸಿತ್ತು. ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಭೂಮಿ ಕೊಟ್ಟವರಿಗೆ ಪರಿಹಾರ ನೀಡಬೇಕಾಗಿತ್ತು. ಆದರೆ ಹೈಕೋರ್ಟ್ ಆದೇಶದ ಬಳಿಕವೂ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರದ ಮೇಲೆ ಜಸ್ಟೀಸ್ ಬಿ.ಆರ್ ಗವಾಯಿ ಅವರು ಗರಂ ಆಗಿದ್ದಾರೆ. ಅನಗತ್ಯವಾಗಿ ಮೇಲ್ಮನವಿ ಸಲ್ಲಿಸಿದ್ದು ನಿಷ್ಪ್ರಯೋಜಕ ಎಂದು ಪರಿಗಣಿಸಿ ಕರ್ನಾಟಕ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಭೂಮಿ ಕೊಟ್ಟವರಿಗೆ ಪರಿಹಾರ ನೀಡಬೇಕಾದ ರಾಜ್ಯ ಸರ್ಕಾರ ಈಗ ಸುಪ್ರೀಂಕೋರ್ಟ್ ಹಾಕಿದ 5 ಲಕ್ಷ ರೂಪಾಯಿ ದಂಡವನ್ನು ಕಟ್ಟಬೇಕಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ