ಎರಡು ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ
ಪೂರ್ಣೇಶ್ ಮೋದಿ, ಗುಜರಾತ್ ಸರ್ಕಾರಕ್ಕೆ ನೋಟಿಸ್
ಸುಪ್ರೀಂ ಕೋರ್ಟ್ ರಾಹುಲ್ ಪರ ವಕೀಲರಿಗೆ ಹೇಳಿದ್ದೇನು..?
ನವದೆಹಲಿ: ‘ಮೋದಿ ಉಪನಾಮ’ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ತಮಗೆ ನೀಡಿರುವ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಸಿರುವ ಕೋರ್ಟ್ ಮುಂದಿನ ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ‘ಮೋದಿ ಎಂಬ ಉಪನಾಮ ಹೊಂದಿರೋರೆಲ್ಲ ಕಳ್ಳರೇ’ ಎಂದಿದ್ದರು. ರಾಹುಲ್ ಈ ಹೇಳಿಕೆ ಪ್ರಶ್ನಿಸಿ ಗುಜರಾತ್ನ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಧಾವೆ ಹೂಡಲಾಗಿತ್ತು.
ವಿಚಾರಣೆ ನಡೆಸಿದ್ದ ಕೆಳ ನ್ಯಾಯಾಲಯವು, ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು. ಈ ಬೆನ್ನಲ್ಲೇ, ರಾಹುಲ್ ಗಾಂಧಿ ತಮ್ಮ ಸಂಸತ್ ಸ್ಥಾನವನ್ನು ಕಳೆದುಕೊಂಡರು. ಕೋರ್ಟ್ನ ಈ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ, ಗುಜರಾತ್ನ ಹೈಕೋರ್ಟ್ ಮೊರೆ ಹೋಗಿದ್ದರು. ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾ ಮಾಡಿ, ಕೆಳ ನ್ಯಾಯಾಲಯದ ಆದೇಶ ಸರಿ ಇದೆ ಎಂದಿತ್ತು. ಹೀಗಾಗಿ ರಾಹುಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಇಂದು ರಾಹುಲ್ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 04ಕ್ಕೆ ಮುಂದೂಡಿದೆ. ಮಾತ್ರವಲ್ಲ ರಾಹುಲ್ ವಿರುದ್ಧ ಕೇಸ್ ದಾಖಲಿಸಿರುವ ಪೂರ್ಣೇಶ್ ಮೋದಿ ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿ 10 ದಿನಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಸುಪ್ರೀಂಕೋರ್ಟ್ನಲ್ಲಿ ಏನಾಯ್ತು?
ಸುಪ್ರೀಂ ಕೋರ್ಟ್ನಲ್ಲಿ ರಾಹುಲ್ ಗಾಂಧಿ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಕಕ್ಷಿದಾರ ರಾಹುಲ್ ಗಾಂಧಿ 122 ದಿನಗಳಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದಾರೆ. ಈಗಾಗಲೇ ಅವರು ಒಂದು ಸಂಸತ್ ಅಧಿವೇಶನವನ್ನು ಕಳೆದುಕೊಂಡಿದ್ದಾರೆ. ಕೇರಳದ ವಯನಾಡಿನ ಲೋಕಸಭಾ ಕ್ಷೇತ್ರಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಆದಷ್ಟು ಬೇಗ ನಡೆಸಬೇಕು ಎಂದು ಮನವಿ ಮಾಡಿಕೊಂಡರು.
ನ್ಯಾಯಮೂರ್ತಿ ಗವಾಯಿ ಅವರು, ನಾವು ನಿಮ್ಮದಷ್ಟೇ ವಾದ ಕೇಳಿದರೆ ಸೂಕ್ತ ಎನಿಸುವುದಿಲ್ಲ. ಎರಡು ಕಡೆಯಿಂದ ವಾದ-ಪ್ರತಿವಾದ ಕೇಳಬೇಕಾಗಿದೆ. ಇದರಿಂದ ಇನ್ನೊಂದು ಕಡೆಯವರ ವಾದ ಕೇಳಬೇಕಾಗಿದೆ. ಹೀಗಾಗಿ ಆಗಸ್ಟ್ 4 ರಂದು ಈ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ