ಬಾಬಾ ರಾಮ್‌ದೇವ್ ಪತಂಜಲಿಗೆ ಸುಪ್ರೀಂಕೋರ್ಟ್ ಶಾಕ್! ಕೇಂದ್ರ ಸರ್ಕಾರಕ್ಕೂ ತರಾಟೆ

author-image
admin
Updated On
ಬಾಬಾ ರಾಮ್‌ದೇವ್ ಪತಂಜಲಿಗೆ ಸುಪ್ರೀಂಕೋರ್ಟ್ ಶಾಕ್! ಕೇಂದ್ರ ಸರ್ಕಾರಕ್ಕೂ ತರಾಟೆ
Advertisment
  • ಕ್ರಮ ಕೈಗೊಳ್ಳದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ
  • ಪತಂಜಲಿ, ಆಚಾರ್ಯ ಬಾಲಕೃಷ್ಣಗೆ ನ್ಯಾಯಾಂಗ ನಿಂದನೆ ನೋಟಿಸ್
  • ಔಷಧ ಗುಣವಿರೋ ಬಗ್ಗೆ ತಪ್ಪು ದಾರಿಗೆಳೆಯುವ ಜಾಹೀರಾತು ಪ್ರಸಾರ

ನವದೆಹಲಿ: ಪತಂಜಲಿ ಕಂಪನಿ ಜಾಹೀರಾತುಗಳಿಂದ ಸುಳ್ಳು ಹಾಗೂ ಇಡೀ ದೇಶವನ್ನು ತಪ್ಪು ದಾರಿಗೆಳೆಯಲಾಗುತ್ತಿದೆ. ಇಂತಹ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರಕ್ಕೂ ಸುಪ್ರೀಂಕೋರ್ಟ್ ಇಂದು ತರಾಟೆ ತೆಗೆದುಕೊಡಿದೆ.

ಪತಂಜಲಿ ಕಂಪನಿಯು ತನ್ನ ಆಯುರ್ವೇದ ಉತ್ಪನ್ನಗಳಲ್ಲಿ ಔಷಧ ಗುಣವಿರೋ ಬಗ್ಗೆ ಸುಳ್ಳು ಹಾಗೂ ತಪ್ಪು ದಾರಿಗೆಳೆಯುವ ಜಾಹೀರಾತುಗಳ ಪ್ರಸಾರ ಮಾಡುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಲು ಭಾರತೀಯ ವೈದ್ಯಕೀಯ ಸಂಘ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸುಳ್ಳು, ತಪ್ಪು ದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೂ ಗರಂ ಆಗಿದೆ.

publive-image

ಕೇಂದ್ರ ಸರ್ಕಾರ ತನ್ನ ಕಣ್ಣು ಮುಚ್ಚಿಕೊಂಡು ಕುಳಿತಿದೆ. ಇಂಥ ಜಾಹೀರಾತುಗಳಿಂದ ಇಡೀ ದೇಶವನ್ನು ತಪ್ಪು ದಾರಿಗೆಳೆಯಲಾಗುತ್ತಿದೆ. ಇದು ದುರಾದೃಷ್ಟಕರ. ಈ ಸರ್ಕಾರ ತಕ್ಷಣವೇ ಪತಂಜಲಿ ಕಂಪನಿಗೆ ತಪ್ಪು ದಾರಿಗೆಳೆಯುವ ಜಾಹೀರಾತು ಪ್ರಚಾರ ನಿಲ್ಲಿಸಲು ಸೂಚನೆ ನೀಡಬೇಕು ಎಂದಿದೆ.

publive-image

ಕಳೆದ ನವಂಬರ್‌ನಲ್ಲಿ ತಪ್ಪು ದಾರಿಗೆಳೆಯುವ ಜಾಹೀರಾತು ವಿರುದ್ಧ ಕ್ರಮ ಕೈಗೊಳ್ಳಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೇ ಯಾವುದೇ ಕ್ರಮ ಕೈಗೊಳ್ಳದ್ದಕ್ಕೆ ಇಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡಿದೆ. ಇದೇ ವೇಳೆ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಪತಂಜಲಿ ಹಾಗೂ ಆಚಾರ್ಯ ಬಾಲಕೃಷ್ಣಗೆ ನ್ಯಾಯಾಂಗ ನಿಂದನೆ ನೋಟಿಸ್ ಕೂಡ ಜಾರಿ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment