ಅನುಮತಿ ಇಲ್ಲದೆ ಯಾವುದೇ ಕಟ್ಟಡ, ಮನೆ ಧ್ವಂಸ ಮಾಡುವಂಗಿಲ್ಲ
ದೇಶದಲ್ಲಿ ಬುಲ್ಡೋಜರ್ ನ್ಯಾಯ ಸ್ಥಗಿತಗೊಳಿಸಿದ ಸುಪ್ರೀಂಕೋರ್ಟ್!
ಬುಲ್ಡೋಜರ್ ನ್ಯಾಯ ಪದ್ಧತಿ ಮೂಲಕ ಅಪರಾಧಿಗಳ ಮನೆ ನಾಶ
ನವದೆಹಲಿ: ಕ್ರಿಮಿನಲ್ ಆರೋಪಿಗಳಿಗೆ ಸಂಬಂಧಿಸಿದ ಮನೆ, ಆಸ್ತಿ-ಪಾಸ್ತಿಗಳನ್ನು ಧ್ವಂಸ ಮಾಡುವ ಬುಲ್ಡೋಜರ್ ಕಾರ್ಯಾಚರಣೆಗೆ ಸದ್ಯ ಸುಪ್ರೀಂಕೋರ್ಟ್ ತಡೆ ನೀಡಿದೆ. ಮುಂದಿನ ಆದೇಶ ಬರುವವರೆಗೂ ಖಾಸಗಿ ಒಡೆತನದ ಆಸ್ತಿಗಳನ್ನು ಬುಲ್ಡೋಜರ್ ಮೂಲಕ ಹಾನಿ ಮಾಡಬಾರದು ಎಂದು ಕೋರ್ಟ್ ಹೇಳಿದೆ.
ಉತ್ತರಪ್ರದೇಶ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕ್ರಿಮಿನಲ್ ಆರೋಪಿಗಳಿಗೆ ಸಂಬಂಧಿಸಿದ ಮನೆ ಹಾಗೂ ಅವರ ಆಸ್ತಿಪಾಸ್ತಿಗಳನ್ನು ಬುಲ್ಡೋಜರ್ ಮೂಲಕ ನಾಶ ಮಾಡಲಾಗುತ್ತಿತ್ತು. ಇದರಿಂದ ಆರೋಪಿಗಳನ್ನು ಆರ್ಥಿಕವಾಗಿ ಕುಗ್ಗಿಸಲಾಗುತ್ತಿತ್ತು. ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದವನ್ನು ನ್ಯಾಯಾಲಯ ತಳ್ಳಿ ಹಾಕಿತು. ಆದರೆ ಸುಪ್ರೀಂಕೋರ್ಟ್ ಇದಕ್ಕೆ ತಡೆ ನೀಡಿದ್ದು ಅಕ್ಟೋಬರ್ 1ರವರೆಗೆ ಪ್ರಕರಣವನ್ನು ಕಾಯ್ದಿರಿಸಿದೆ.
ಇದನ್ನೂ ಓದಿ: ಮೈಸೂರು ಸಿಲ್ಕ್ ಸೀರೆಗೆ ಸಿಕ್ಕಾಪಟ್ಟೆ ಡಿಮ್ಯಾಂಡ್.. ಕ್ಯೂ ನಿಂತರೂ ಸಿಗುತ್ತಿಲ್ಲ ಸ್ಯಾರಿ; ಕಾರಣವೇನು?
ಆರೋಪಿಗಳ ಮನೆ ಧ್ವಂಸಕ್ಕೆ ಬ್ರೇಕ್ ಹಾಕಿರುವ ಸುಪ್ರೀಂಕೋರ್ಟ್ ಸಾರ್ವಜನಿಕ ರಸ್ತೆ, ಫುಟ್ ಪಾತ್, ಕೆರೆ, ರೈಲ್ವೆ ಟ್ರ್ಯಾಕ್ ಮೇಲೆ ಕಟ್ಟಡ ನಿರ್ಮಾಣ ಮಾಡಿದ್ದರೆ ಧ್ವಂಸ ಮಾಡಲು ಅವಕಾಶ ನೀಡಿದೆ. ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ ಕೆಲವು ಕಡೆ ಬುಲ್ಡೋಜರ್ ಅಸ್ತ್ರ ಪ್ರಯೋಗಿಸುತ್ತಿರುವುದಕ್ಕೆ ಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದೆ. ಇನ್ನು ಬುಲ್ಡೋಜರ್ ಧ್ವಂಸ ಕ್ರಮದ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ