newsfirstkannada.com

ಎಲೆಕ್ಟೋರಲ್ ಬಾಂಡ್ ಸ್ಕೀಮ್ ಬಗ್ಗೆ ಇಂದು ಮಹತ್ವದ ತೀರ್ಪು; ಏನಿದು ಚುನಾವಣಾ ಬಾಂಡ್..?

Share :

Published February 15, 2024 at 8:00am

    ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠದಿಂದ ತೀರ್ಪು

    ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೆ ತಂದಿದ್ದ ಯೋಜನೆ

    ಪಕ್ಷಗಳು ಪಡೆಯುವ ನಿಧಿಯಲ್ಲಿ ಪಾರದರ್ಶಕತೆ ಪ್ರಯತ್ನ

ಚುನಾವಣಾ ಬಾಂಡ್ (ಎಲೆಕ್ಟೋರಲ್ ಬಾಂಡ್) ಯೋಜನೆ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಲಿದೆ. ಚುನಾವಣಾ ಬಾಂಡ್ ಯೋಜನೆಯ ಕಾನೂನು ಮಾನ್ಯತೆ ಪ್ರಶ್ನಿಸುವ ಸಲ್ಲಿಸಲಾಗಿರುವ ಅರ್ಜಿಗಳ ಭವಿಷ್ಯ ಇಂದು ತಿಳಿಯಲಿದೆ. ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ನವೆಂಬರ್ 2 ರಂದು ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ತೀರ್ಪನ್ನು ಕಾಯ್ದಿರಿಸಿದೆ.

ಏನಿದು ಎಲೆಕ್ಟೋರಲ್ ಬಾಂಡ್..?

ಕೇಂದ್ರ ಸರ್ಕಾರವು 2018ರಲ್ಲಿ ಎಲೆಕ್ಟೋರಲ್ ಬಾಂಡ್ ಯೋಜನೆ ಪ್ರಾರಂಭಿಸಿತು. ರಾಜಕೀಯ ಪಕ್ಷಗಳು ಪಡೆಯುವ ನಿಧಿಯಲ್ಲಿ ಪಾರದರ್ಶಕತೆಯನ್ನು ತರುವ ಪ್ರಯತ್ನ ಇದಾಗಿದೆ. ಇದನ್ನು ದೇಶದ ಯಾವುದೇ ನಾಗರಿಕ ಅಥವಾ ಕಂಪನಿಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆಯ್ದ ಶಾಖೆಗಳಿಂದ ಖರೀದಿಸಬಹುದು. ನಾಗರಿಕರು ಅಥವಾ ಕಾರ್ಪೊರೇಟ್‌ಗಳು ತಮ್ಮ ಆಯ್ಕೆಯ ಯಾವುದೇ ರಾಜಕೀಯ ಪಕ್ಷಕ್ಕೆ ಬಾಂಡ್​ ದಾನ ಮಾಡಬಹುದು.

ಸ್ಟೇಟ್ ಬ್ಯಾಂಕಿನ ಕೆಲವು ಆಯ್ದ ಶಾಖೆಗಳಲ್ಲಿ ಎಲೆಕ್ಟೋರಲ್ ಬಾಂಡ್‌ಗಳು ಲಭ್ಯವಿವೆ. ಯಾವುದೇ ನಾಗರಿಕ, ಕಂಪನಿ ಅಥವಾ ಸಂಸ್ಥೆಯು ಈ ಬಾಂಡ್ ಖರೀದಿಸಬಹುದು. ಈ ಬಾಂಡ್‌ಗಳು 1000, 10 ಸಾವಿರ, 1 ಲಕ್ಷ ಮತ್ತು 1 ಕೋಟಿ ರೂ. ಯಾವುದೇ ಪಕ್ಷಕ್ಕೆ ದೇಣಿಗೆ ನೀಡಲು ಬಯಸೋರು ಚುನಾವಣಾ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಕ್ಕೆ ನೀಡಬಹುದು. ವಿಶೇಷವೆಂದರೆ ದಾನಿ ತನ್ನ ಹೆಸರನ್ನು ಬಾಂಡ್‌ನಲ್ಲಿ ಬರೆಯಬೇಕಾಗಿಲ್ಲ.

ಯಾವ ಪಕ್ಷಗಳು ದೇಣಿಗೆ ಪಡೆಯಬಹುದು?
ಜನತಾ ಪ್ರಾತಿನಿಧ್ಯ ಕಾಯಿದೆ 1951 ರ ಸೆಕ್ಷನ್ 29A ಅಡಿಯಲ್ಲಿ ನೋಂದಾಯಿಸಲ್ಪಟ್ಟ ಮತ್ತು ಕಳೆದ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾ ಒಂದಕ್ಕಿಂತ ಹೆಚ್ಚು ಮತಗಳನ್ನು ಪಡೆದ ರಾಜಕೀಯ ಪಕ್ಷಗಳು ಈ ಬಾಂಡ್‌ಗಳನ್ನು ಪಡೆಯಬಹುದು.

ಇದರ ವಿರುದ್ಧ ಅರ್ಜಿ ಸಲ್ಲಿಸಿದವರು ಯಾರು?
ಚುನಾವಣಾ ಬಾಂಡ್‌ಗಳ ಸಿಂಧುತ್ವವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್, ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷ ಮತ್ತು ಎನ್‌ಜಿಒ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸೇರಿದಂತೆ ಒಟ್ಟು ನಾಲ್ಕು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ. ಚುನಾವಣಾ ಬಾಂಡ್‌ಗಳು ನೀಡಿದ ಅನಾಮಧೇಯತೆಯು ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯ ಮೇಲೆ ಪರಿಣಾಮ ಬೀರುತ್ತದೆ. ಮತದಾರರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಎಲೆಕ್ಟೋರಲ್ ಬಾಂಡ್ ಸ್ಕೀಮ್ ಬಗ್ಗೆ ಇಂದು ಮಹತ್ವದ ತೀರ್ಪು; ಏನಿದು ಚುನಾವಣಾ ಬಾಂಡ್..?

https://newsfirstlive.com/wp-content/uploads/2023/11/Modi_Rahul_1.jpg

Load More