newsfirstkannada.com

ಪ್ರಜ್ವಲ್, ದರ್ಶನ್ ಬೆನ್ನಲ್ಲೇ ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಪಾಲು; ಅಚ್ಚರಿಯ ಆದೇಶ!

Share :

Published June 23, 2024 at 8:44pm

    ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಬಂಧನ

    42 ಎಸಿಎಂಎಂ ‌ನ್ಯಾಯಧೀಶ ಶಿವಕುಮಾರ್ ಅವರಿಂದ ಆದೇಶ

    ಹಾಸನ ಸೆನ್ ಪೊಲೀಸ್‌ ಠಾಣೆಯಲ್ಲಿ ಸೂರಜ್ ವಿರುದ್ಧ FIR ದಾಖಲು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಅಂದ್ರೆ ಸಲಿಂಗ ಕಾಮದ ಆರೋಪದಲ್ಲಿ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ ಆಘಾತ ಎದುರಾಗಿದೆ. ಹಾಸನದಲ್ಲಿ ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಬೆಂಗಳೂರಿಗೆ ಕರೆ ತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಹಾಸನದ ಸೆನ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಸೂರಜ್ ರೇವಣ್ಣ ಅವರ ಮೊಬೈಲ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ಗೆ ಹೊಸ ಟ್ವಿಸ್ಟ್.. ತಬ್ಬಿಬ್ಬಾದ ಸೂರಜ್ ರೇವಣ್ಣ ಹೇಳಿದ್ದೇನು? 

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸೆನ್ ಪೊಲೀಸ್‌ ಠಾಣೆಯಲ್ಲಿ FIR ದಾಖಲಾಗಿದೆ. ಈ ವಿಚಾರ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.

ಸೂರಜ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಕೇಸ್‌ ಅನ್ನು ಸಿಐಡಿ ತನಿಖೆ ವಹಿಸಿದ ಮೇಲೆ ಆರೋಪಿಯನ್ನು ಹಾಸನದಿಂದ ಬೆಂಗಳೂರಿಗೆ ಕರೆತರಲಾಗಿದೆ. ಬೆಂಗಳೂರಲ್ಲಿ ಸೂರಜ್‌ ರೇವಣ್ಣ ಅವರಿಗೆ ಮೆಡಿಕಲ್ ಚೆಕಪ್ ಮಾಡಿಸಿ, ಕೋರಮಂಗಲದ ಎನ್‌ಜಿವಿಯಲ್ಲಿ ಇರುವ 42 ಎಸಿಎಂಎಂ ‌ನ್ಯಾಯಧೀಶ ಶಿವಕುಮಾರ್ ಅವರ ನಿವಾಸಕ್ಕೆ ಹಾಜರುಪಡಿಸಲಾಗಿತ್ತು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ಸೂರಜ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ತಮ್ಮ ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ಹಾಗೂ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡಿದೆ. ಇದೀಗ ಪ್ರಜ್ವಲ್, ದರ್ಶನ್ ಅವರ ಬೆನ್ನಲ್ಲೇ ಸೂರಜ್ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಜ್ವಲ್, ದರ್ಶನ್ ಬೆನ್ನಲ್ಲೇ ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಪಾಲು; ಅಚ್ಚರಿಯ ಆದೇಶ!

https://newsfirstlive.com/wp-content/uploads/2024/06/Suraj-Revanna-Arrest-Case-1.jpg

Load More