newsfirstkannada.com

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

Share :

Published May 14, 2024 at 6:35am

Update May 14, 2024 at 6:36am

  ರಾಜ್ಯಸಭಾ ಸದಸ್ಯರಾಗಿ ಕೆಲಸ ಮಾಡಿದ್ದ ಸುಶೀಲ್ ಮೋದಿ

  ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನ

  ಇಂದು ಅವರ ಪಾರ್ಥಿವ ಶರೀರ ದೆಹಲಿಯಿಂದ ತರಲಾಗುತ್ತದೆ

ಪಾಟ್ನಾ: ಬಿಹಾರದ ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ (72) ಅವರು ನಿಧನ ಹೊಂದಿದ್ದಾರೆ. ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಯಲ್ಲಿ ಸುಶೀಲ್ ಮೋದಿ ನಿಧನ ಹೊಂದಿದ್ದಾರೆ.

ಇದನ್ನೂ ಓದಿ: ಗಗನಕ್ಕೇರಿದ ತರಕಾರಿ ಬೆಲೆ; ಅಬ್ಬಬ್ಬಾ! ರೇಟ್​ ಕೇಳಿದ್ರೆ ಪಕ್ಕಾ ಶಾಕ್​ ಆಗ್ತೀರಾ!

ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಹಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದರು. ಸುಶೀಲ್ ಕುಮಾರ್ ಮೋದಿ ರಾಜ್ಯಸಭಾ ಸದಸ್ಯರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಪಾರ್ಥಿವ ಶರೀರವನ್ನು ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುತ್ತಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನದ ಬಳಿಕ ಕುಟುಂಬಸ್ಥರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಸುಶೀಲ್ ಕುಮಾರ್ ಮೋದಿ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

https://newsfirstlive.com/wp-content/uploads/2024/05/SUSHIL_MODI.jpg

Load More