/newsfirstlive-kannada/media/post_attachments/wp-content/uploads/2024/06/IND-VS-SA-2.jpg)
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತದ ಪ್ರತಿಯೊಬ್ಬ ಕ್ರಿಕೆಟ್ ಪ್ರೇಮಿಯೂ ಈ ಪಂದ್ಯದ ಮೇಲೆ ಕಣ್ಣಿಟ್ಟಿರುತ್ತಾರೆ. ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾ ಗೆಲುವಿಗೆ ಬಾಲಿವುಡ್ ಸ್ಟಾರ್​ ಅಭಿನಂದನೆ ತಿಳಿಸಿದ್ದಾರೆ. ನಟ ಸೋನು ಸೂದ್ ಟೀಂ ಇಂಡಿಯಾಗೆ ಈ ಮುಂಗಡ (ಅಡ್ವಾನ್ಸ್​)ವಾಗಿ ಅಭಿನಂದನೆ ತಿಳಿಸಿದ್ದಾರೆ.
/newsfirstlive-kannada/media/post_attachments/wp-content/uploads/2024/06/IND-VS-SA-1.jpg)
ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಟೀಂ ಇಂಡಿಯಾ ಯಾವುದೇ ಟೂರ್ನಿಯ ಫೈನಲ್‌ನಲ್ಲಿ ಆಡಿದಾಗಲೂ ಬಾಲಿವುಡ್ ಸ್ಟಾರ್​​ಗಳು ಸಾಕಷ್ಟು ಪ್ರತಿಕ್ರಿಯೆ ನೀಡುತ್ತಾರೆ. ಇದೀಗ ಪಂದ್ಯ ಆರಂಭಕ್ಕೂ ಮುನ್ನವೇ ಸೋನು ಸೂದ್ ಶುಭಾಶಯ ಕೋರಿ ಅಚ್ಚರಿ ಮೂಡಿಸಿದ್ದಾರೆ. ಟ್ವೀಟ್ ಮಾಡಿರುವ ಸೋನು ಸೂದ್​.. ‘ಟೀಮ್ ಇಂಡಿಯಾಗೆ ಮುಂಚಿತವಾಗಿಯೇ ಅಭಿನಂದನೆಗಳು. ವಿಶ್ವಕಪ್ ನಮ್ಮದು’ ಎಂದು ಬರೆದುಕೊಂಡಿದ್ದಾರೆ.
Congratulations team India in advance 🤞
World Cup is ours🤩 #TeamIndia#IndiavsSouthAfrica@cricketworldcup@ICC— sonu sood (@SonuSood) June 29, 2024
ಭಾರತ ತಂಡವು ಬಲಿಷ್ಠ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶ ಮಾಡಿದೆ. ಕಳೆದ ಎರಡು ಐಸಿಸಿ ಟೂರ್ನಿಗಳಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಭಾರತ ತಂಡಕ್ಕೆ ಪೆಟ್ಟು ನೀಡಿದ್ದವು. 2022ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಸೆಮಿಫೈನಲ್‌ನಲ್ಲಿ ಭಾರತವನ್ನು ಸೋಲಿಸಿತ್ತು. 2023ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿತ್ತು.
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us