newsfirstkannada.com

ರಾಜ್ಯಕ್ಕೆ ಬರಬೇಕಾದ ಕೇಂದ್ರದ ಅನುದಾನದ ಬಗ್ಗೆ ಸರ್ಕಾರ ಕೈಗೊಂಡ ಕ್ರಮವೇನು?- ಸಿದ್ದರಾಮಯ್ಯಗೆ ಟಿ.ಎ ಶರವಣ ಪ್ರಶ್ನೆ

Share :

06-07-2023

    ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನದ ಬಗ್ಗೆ ಪ್ರಶ್ನೆ

    ಅನುದಾನದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮವೇನು?

    ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ ಕೇಳಿದ ಎಂಎಲ್​​ಸಿ ಟಿ.ಎ ಶರವಣ

ಬೆಂಗಳೂರು: ಇಂದು ನಡೆದ ವಿಧಾನ ಮಂಡಲದ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅನುದಾನದ ಕುರಿತಂತೆ ಮಾನ್ಯ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನಪರಿಷತ್ ಶಾಸಕರಾದ ಟಿ.ಎ ಶರವಣ ಅವರು ಪ್ರಶ್ನಿಸಿದರು.

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಾದ ಸುಮಾರು 5000 ಕೋಟಿಗೂ ಹೆಚ್ಚುವರಿ ವಿಶೇಷ ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಲು ನಿರಾಕರಿಸುತ್ತಿರುವ ವಿಷಯದ ಬಗ್ಗೆ ಪ್ರಸ್ತಾಪಿಸಿದರು. ಅದು ಸತ್ಯ ಸಂಗತಿ. ಆದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿ ಮಾಡಲು, ಅನುದಾನವನ್ನು ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎನ್ನುವುದರ ಬಗ್ಗೆ ಮಾಹಿತಿ ನೀಡಬೇಕೆಂದು ತಿಳಿಸಿದರು.

ಸೋಮವಾರದಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ಮೊದಲ ಅಧಿವೇಶನ ಶುರುವಾಗಿದೆ. ನಾಳೆ ಸಿಎಂ ಸಿದ್ದರಾಮಯ್ಯ ತನ್ನ ಸರ್ಕಾರದ ಮೊದಲ ಬಜೆಟ್​ ಮಂಡನೆಗೆ ಮುಂದಾಗಿದ್ದಾರೆ. ಹೀಗಿರುವಾಗಲೇ ಕಾಂಗ್ರೆಸ್​​ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ, ಜೆಡಿಎಸ್​​ ಮುಂದಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯಕ್ಕೆ ಬರಬೇಕಾದ ಕೇಂದ್ರದ ಅನುದಾನದ ಬಗ್ಗೆ ಸರ್ಕಾರ ಕೈಗೊಂಡ ಕ್ರಮವೇನು?- ಸಿದ್ದರಾಮಯ್ಯಗೆ ಟಿ.ಎ ಶರವಣ ಪ್ರಶ್ನೆ

https://newsfirstlive.com/wp-content/uploads/2023/07/sharavana.jpg

Load More