/newsfirstlive-kannada/media/post_attachments/wp-content/uploads/2023/09/Vijay-Sharma_Tamannah.jpg)
ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ. ಇವರು ನಟ ವಿಜಯ್ ವರ್ಮಾ ಅವರೊಂದಿಗೆ ಬ್ರೇಕ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಜೋಡಿ ಮದುವೆ ಆಗಲಿದೆ ಎನ್ನುವ ಸುದ್ದಿ ಹಬ್ಬಿತ್ತು. ಈ ಹೊತ್ತಲ್ಲೇ ಫ್ಯಾನ್ಸ್ಗೆ ತಮನ್ನಾ, ವಿಜಯ್ ವರ್ಮಾ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ.
ಅಸಲಿಗೆ ಆಗಿದ್ದೇನು?
ಹಲವು ದಿನಗಳಿಂದ ತಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮಾ ಮಧ್ಯೆ ಭಿನ್ನಾಭಿಪ್ರಾಯ ಇತ್ತು. ಕಳೆದ ವಾರವಷ್ಟೇ ಇಬ್ಬರು ಬ್ರೇಕಪ್ ಮಾಡಿಕೊಂಡರು. ಇಬ್ಬರು ಪರಸ್ಪರ ಒಪ್ಪಿಗೆಯಿಂದಲೇ ದೂರ ಆದರು. ಮುಂದಿನ ದಿನಗಳಲ್ಲಿ ಒಳ್ಳೆಯ ಸ್ನೇಹಿತರಾಗಿ ಇರೋಣ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಲಸ್ಟ್ ಸ್ಟೋರೀಸ್ 2 ಸಿನಿಮಾದಲ್ಲಿ ತಮನ್ನಾ ಮತ್ತು ವಿಜಯ್ ವರ್ಮಾ ಜೊತೆಯಾಗಿ ನಟಿಸಿದ್ದರು. ಎರಡು ವರ್ಷಗಳ ಹಿಂದೆ 2023ರ ಆರಂಭದಲ್ಲೇ ಇಬ್ಬರ ಲವ್ ವಿಚಾರ ಬಹಿರಂಗ ಆಗಿತ್ತು. ಇಬ್ಬರು ಮದುವೆ ಆಗುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು.
ಚಿತ್ರರಂಗದಲ್ಲಿ ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರಿಗೂ ಒಳ್ಳೆಯ ಬೇಡಿಕೆ ಇದೆ. ಸದ್ಯ ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಬ್ರೇಕಪ್ ಮಾಡಿಕೊಂಡು ಪರಸ್ಪರ ಸ್ನೇಹಿತರಾಗಿ ಮುಂದುವರಿಯುವ ನಿರ್ಧಾರಕ್ಕೆ ಬಂದಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಇದನ್ನೂ ಓದಿ:ಎದುರಾಳಿಗಳಿಗೆ ಮಣ್ಣು ಮುಕ್ಕಿಸಿದ ಭಾರತ; ಆಸ್ಟ್ರೇಲಿಯಾ ಕೇವಲ 264 ರನ್ಗೆ ಆಲೌಟ್
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್