/newsfirstlive-kannada/media/post_attachments/wp-content/uploads/2024/10/TAMANNA.jpg)
ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸುತ್ತಿದೆ. ಮಹದೇವ್ ಬೆಟ್ಟಿಂಗ್ ಆ್ಯಪ್‌ನ ಅಂಗಸಂಸ್ಥೆ ‘ಫೇರ್ ಪ್ಲೇ’ನಲ್ಲಿ (Fairplay) ಐಪಿಎಲ್ ಪಂದ್ಯಗಳನ್ನು ಪ್ರಚಾರ ಮಾಡುವ ಪ್ರಕರಣದಲ್ಲಿ ನಟಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಈ ಆ್ಯಪ್‌ನಲ್ಲಿ ಐಪಿಎಲ್ ಪಂದ್ಯಗಳನ್ನು ಅಕ್ರಮವಾಗಿ ಪ್ರಸಾರ ಮಾಡಲಾಗಿದ್ದು, ಇದರಿಂದ ವಯಾಕಾಮ್ 1 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಕಾರಣ ತಮನ್ನಾ ಭಾಟಿಯಾ ಅವರನ್ನು ಗುವಾಹಟಿಯ ಇಡಿ ಕಚೇರಿಯಲ್ಲಿ ನಿರಂತರವಾಗಿ ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಪಿಝೆಡ್ ಟೋಕನ್ ಮೊಬೈನ್ ಅಪ್ಲಿಕೇಶನ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಳನ್ನು ಸಹ ಮಾಡಲಾಗಿದೆ.
ಇದನ್ನೂ ಓದಿ:ಸಲ್ಮಾನ್ ಖಾನ್ಗೆ ನೀಡಿರುವ Y plus ಭದ್ರತೆಗೆ ಸರ್ಕಾರ ಎಷ್ಟು ಖರ್ಚು ಮಾಡುತ್ತದೆ..?
ತಮನ್ನಾರ ಯಾಕೆ ವಿಚಾರಣೆ ?
HPZ ಅಪ್ಲಿಕೇಶನ್‌ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ (PMLA) ತಮನ್ನಾ ಭಾಟಿಯಾ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ಅಪ್ಲಿಕೇಶನ್ ಅನ್ನು ತಮನ್ನಾ ಭಾಟಿಯಾ ಪ್ರಚಾರ ಮಾಡಿದ್ದಾರೆ. ಈ ಪ್ರಕರಣದಲ್ಲಿ ತಮನ್ನಾ ಭಾಟಿಯಾ ಅವರನ್ನು ಆರೋಪಿಯಾಗಿ ವಿಚಾರಣೆ ಮಾಡಲಾಗುತ್ತಿಲ್ಲ. ಈ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ. ಇನ್ನು HPZ ಅಪ್ಲಿಕೇಶನ್‌ಗೂ, ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ಗೂ ಪರಸ್ಪರ ಲಿಂಕ್ ಇದೆ.
ಕೋಟ್ಯಂತರ ರೂಪಾಯಿ ಹಗರಣ
ಈ ಆ್ಯಪ್ ಮೂಲಕ 57,000 ರೂಪಾಯಿ ಹೂಡಿಕೆ ಮಾಡಿದ ಜನರಿಗೆ ದಿನಕ್ಕೆ 4,000 ರೂಪಾಯಿ ಕೊಡುವುದಾಗಿ ಭರವಸೆ ನೀಡಿ ವಂಚಿಸಲಾಗಿದೆ. ವಂಚಿಸಲು ಶೆಲ್ ಕಂಪನಿಗಳ ಹೆಸರಿನಲ್ಲಿ ವಿವಿಧ ಬ್ಯಾಂಕ್‌ಗಳಲ್ಲಿ ನಕಲಿ ಖಾತೆಗಳನ್ನು ತೆರೆಯಲಾಗಿದೆ. ಅದರಲ್ಲಿ ಹೂಡಿಕೆದಾರರಿಂದ ಹಣವನ್ನು ವರ್ಗಾಯಿಸಲಾಗಿದೆ. ಆರೋಪಿಗಳು ಈ ಹಣವನ್ನು ಕ್ರಿಪ್ಟೋ ಮತ್ತು ಬಿಟ್‌ಕಾಯಿನ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಜೊತೆಗೆ ಮಹಾದೇವ್‌ನಂತಹ ಅನೇಕ ಬೆಟ್ಟಿಂಗ್ ಅಪ್ಲಿಕೇಶನ್‌ಗಳಲ್ಲಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂಬ ಆರೋಪ ಇದೆ.
ಇದನ್ನೂ ಓದಿ:24/7 ಪೊಲೀಸ್ ಗಸ್ತು, AI ವ್ಯವಸ್ಥೆಯ CCTV ಕ್ಯಾಮೆರಾ; ಹೇಗಿದೆ ಸಲ್ಮಾನ್ ಖಾನ್ ನಿವಾಸಕ್ಕೆ ಭದ್ರತೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ