18 ಮಂದಿಯ ಪರಿಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
ಜೋರು ಮಳೆ ಬಂದಿದ್ದರಿಂದ ಮರದ ಕೆಳಗೆ ಆಶ್ರಯ ಪಡೆದಿದ್ದ ಜನ
ಸಿಡಿಲು ಬಡಿದ ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು
ಚೆನ್ನೈ: ಮಳೆ ಬರುತ್ತಿದೆಂದು ಮರದ ಕೆಳಗೆ ನಿಂತಿದ್ದ ಜನರ ಗುಂಪಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ತಮಿಳುನಾಡಿನ ಮದುರೈ ಜಿಲ್ಲೆಯ ಕೀರಾನೂರು ಗ್ರಾಮದಲ್ಲಿ ನಡೆದಿದೆ.
ಕೀರಾನೂರು ಗ್ರಾಮ ಅಗ್ನಿರಾಜ (25), ಸೆಲ್ವಾ (23) ಮೃತ ಯುವಕರು. ಗ್ರಾಮದಲ್ಲಿ ಸಂಬಂಧಿಯೊಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಬಂದಿದ್ದ ಜನರು ಶವ ಸಂಸ್ಕಾರ ಮಾಡಲೆಂದು ತೆರಳುತ್ತಿದ್ದರು. ಈ ವೇಳೆ ಜೋರಾಗಿ ಮಳೆ ಬಂದಿದ್ದರಿಂದ ಹಲವರು ಹೋಗಿ ಮರದ ಕೆಳಗೆ ಆಶ್ರಯ ಪಡೆದುಕೊಂಡಿದ್ದರು.
ಇದೇ ಸಮಯದಲ್ಲಿ ಮರಕ್ಕೆ ಸಿಡಿಲು ಬಡಿದಿದ್ದರಿಂದ ಅದರ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 6 ಗಾಯಾಳುಗಳನ್ನು ಮಧುರೈನ ಸರ್ಕಾರಿ ಆಸ್ಪತ್ರೆಗೆ, ಉಳಿದವರನ್ನು ಶಿವಗಂಗೈ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ