/newsfirstlive-kannada/media/post_attachments/wp-content/uploads/2025/02/HYDRABAD.jpg)
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಾಲೆಯ ಮೂವರು ಶಿಕ್ಷಕರು ಸಾಮೂಹಿಕ ಅನಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿದ್ದು, ಕಠಿಣ ಕ್ರಮಕ್ಕೆ ಒತ್ತಾಯ ಜೋರಾಗಿದೆ.
ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಪ್ರಾಂಶುಪಾಲರು ವಿಚಾರಿಸಿದಾಗ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ.
ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃಷ್ಣಗಿರಿಯ ಮಹಿಳಾ ಪೊಲೀಸ್ ಅಧಿಕಾರಿಗಳು ಮೂವರು ಶಿಕ್ಷಕರನ್ನು ಬಂಧಿಸಿದ್ದಾರೆ. 15 ದಿನಗಳ ಪೊಲೀಸ್ ಕಸ್ಟಡಿಗೆ ಕೋರ್ಟ್ ನೀಡಿದೆ.
ಇದನ್ನೂ ಓದಿ: ಆಸೆ ತೋರಿಸಿ ಮಕ್ಮಲ್ ಟೋಪಿ.. ಲಕ್ಷ ಲಕ್ಷ ಕಳೆದುಕೊಂಡ ಜಮೀನು ಮಾಲೀಕ ಏನ್ ಮಾಡಿದ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ