ಆಪರೇಷನ್ ಸಿಂಧೂರ್; ಭಾರತದಿಂದ ಮಹತ್ವದ ಸುದ್ದಿಗೋಷ್ಟಿ, ಹೈಲೈಟ್ಸ್​..!

author-image
Veena Gangani
Updated On
ಆಪರೇಷನ್ ಸಿಂಧೂರ್; ಭಾರತದಿಂದ ಮಹತ್ವದ ಸುದ್ದಿಗೋಷ್ಟಿ, ಹೈಲೈಟ್ಸ್​..!
Advertisment
  • ಇಬ್ಬರು ಮಹಿಳಾ ಸೇನಾ ಅಧಿಕಾರಿಗಳಿಂದ ದಿಢೀರ್ ಸುದ್ದಿಗೋಷ್ಠಿ
  • 9 ಉಗ್ರರ ಕ್ಯಾಂಪ್ ಟಾರ್ಗೆಟ್ ಮಾಡಿದ್ದೇವೆ- ಸೋಫಿಯಾ ಖುರೇಷಿ ಮಾಹಿತಿ
  • ವ್ಯೋಮಿಕಾ ಸಿಂಗ್​, ಕರ್ನಲ್ ಸೋಫಿಯಾ ಖುರೇಷಿರಿಂದ ಸುದ್ದಿಗೋಷ್ಠಿ

ಏಪ್ರಿಲ್ 22ರಂದು ಪಾಕ್ ಬೆಂಬಲಿತ ಉಗ್ರರು ಕಾಶ್ಮೀರದ ಪಹಲ್ಗಾಮ್​​ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪೈಶಾಚಿಕ ಕೃತ್ಯ ನಡೆಸಿದ್ದರು. ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಜೀವ ಕಳೆದುಕೊಂಡಿದ್ದರು. ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿತ್ತು.

ಈ ಬೆನ್ನಲ್ಲೇ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಿ ಹೊಡೆದುರುಳಿಸಿದೆ. ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಇಬ್ಬರು ಮಹಿಳಾ ಸೇನಾ ಅಧಿಕಾರಿಗಳು ಹಾಗೂ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಪಹಲ್ಗಾಮ್ ದಾಳಿಯಲ್ಲಿ ಟಿಆರ್‌ಎಫ್ ಕೈವಾಡ

ಭಾರತದ ಮೇಲೆ ದಾಳಿ ನಡೆದು ಹದಿನೈದು ದಿನಗಳಾದರೂ ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಾಗಿ ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡಿದರು. ಭಾರತದ ಮೇಲೆ ಮತ್ತಷ್ಟು ದಾಳಿಗಳು ನಡೆಯಬಹುದು. ಆದ್ದರಿಂದ ಅದನ್ನು ನಿಭಾಯಿಸುವುದು ಮುಖ್ಯವಾಗಿತ್ತು. ಭಾರತ ಭಯೋತ್ಪಾದನೆಯ ವಿರುದ್ಧ ತನ್ನ ಹಕ್ಕನ್ನು ಬಳಸಿದೆ. ಪಹಲ್ಗಾಮ್ ದಾಳಿಯ ಮುಖ್ಯ ಉದ್ದೇಶ ದೇಶದಲ್ಲಿ ಕೋಮು ಗಲಭೆಗಳನ್ನು ಪ್ರಚೋದಿಸುವುದಾಗಿದೆ. ಈ ಪಹಲ್ಗಾಮ್ ದಾಳಿಯಲ್ಲಿ ಟಿಆರ್‌ಎಫ್ ಕೈವಾಡ ಇದೆ. ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ತಡೆಯಲು ಬಯಸುತ್ತಾರೆ. ಟಿಆರ್‌ಎಫ್ ಲಷ್ಕರ್‌ಗೆ ಸಂಬಂಧಿಸಿದ ಸಂಘಟನೆಯಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಟಿಆರ್‌ಎಫ್ ಭಾಗಿಯಾಗಿದೆ.

ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳಲಾಗಿದೆ

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿಗೆ 26 ಅಮಾಯಕರು ಜೀವ ಕಳೆದುಕೊಂಡಿದ್ದರು. ಅವರ ಸಾವಿಗೆ ನ್ಯಾಯ ಕೊಡಿಸುವ ಉದ್ದೇಶವೇ ಆಪರೇಷನ್ ಸಿಂಧೂರ್. ಈ ಕಾರ್ಯಾಚರಣೆಯಲ್ಲಿ ಒಟ್ಟು 9 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಲಾಗಿದೆ.  ಆಪರೇಷನ್ ಸಿಂಧೂರ್ ಸಮಯದಲ್ಲಿ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳಲಾಗಿದೆ. ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರ ಅಡಗುತಾಣಗಳನ್ನೂ ಗುರಿಯಾಗಿಸಲಾಗಿದೆ. ಮಾರ್ಚ್ 2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ನಾಲ್ವರು ಸೈನಿಕರು ಸಾವನ್ನಪ್ಪಿದ್ದರು. ಉಗ್ರರಿಗೆ ಪಾಕಿಸ್ತಾನದೊಳಗಿರುವ ಭಯೋತ್ಪಾದಕ ಶಿಬಿರದಲ್ಲಿ ತರಬೇತಿ ನೀಡಲಾಗಿತ್ತು.

ಜೈಶ್ ಉಗ್ರರ ಕಚೇರಿ ಧ್ವಂಸ

ಮರ್ಕಜ್ ಸುಭಾನಲ್ಲಾ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯನ್ನು ನಾಶ ಮಾಡಲಾಗಿದೆ. ಇಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿತ್ತು. ಯಾವುದೇ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡಿಲ್ಲ. ಯಾವುದೇ ನಾಗರಿಕರಿಗೂ ಹಾನಿಯಾಗಿಲ್ಲ ಎಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಲಾಗಿದೆ.

ಮಹಿಳಾ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಟಿ

ಮಹಿಳಾ ಅಧಿಕಾರಿಗಳಾದ ವಿಂಗ್​ ಕಮಾಂಡರ್ ವ್ಯೋಮಿಕಾ ಸಿಂಗ್​ (Wing Commander Vyomika Singh) ಹಾಗೂ ಕರ್ನಲ್ ಸೋಫಿಯಾ ಖುರೇಷಿ (Colonel Sophia Qureshi) ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಸದ್ಯ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ವಿಕ್ರಮಂ ಮಿಸ್ತ್ರಿ ಅವರು ಮಾಹಿತಿ ನೀಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment