/newsfirstlive-kannada/media/post_attachments/wp-content/uploads/2025/06/Ahmedabad-plane-crash-13.jpg)
ಅಹ್ಮದಾಬಾದ್ನ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ದುರಂತದಲ್ಲಿ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ.
ಇನ್ನು, ಟಾಟಾ ಗ್ರೂಪ್, ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ದುಃಖ ವ್ಯಕ್ತಪಡಿಸಿದ್ದು, ಜೀವ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ.
ಇದನ್ನೂ ಓದಿ: ದೇಶದ ಈ ನಗರದಲ್ಲಿ ಮಧ್ಯಾಹ್ನ ಜನ ಮನೆಯಿಂದ ಹೊರಗೆ ಬರ್ತಿಲ್ಲ.. ಕಾರಣ ಏನೆಂದು ತಿಳಿಯಿರಿ..
ಪ್ರತಿ ಕುಟುಂಬಕ್ಕೆ 1 ಕೋಟಿ ರೂಪಾಯಿ
ಗ್ರೂಪ್ ಅಧ್ಯಕ್ಷ ಎನ್.ಚಂದ್ರಶೇಖರನ್ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಏರ್ ಇಂಡಿಯಾ ಫ್ಲೈಟ್-171 ದುರಂತದಿಂದ ತೀವ್ರ ನೋವಾಗಿದೆ. ತಮ್ಮ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ.
ಟಾಟಾ ಗ್ರೂಪ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ. ಅಗತ್ಯ ಆರೈಕೆ ಮತ್ತು ಸಹಾಯವನ್ನು ಖಚಿತಪಡಿಸುವುದರ ಜೊತೆಗೆ ವೈದ್ಯಕೀಯ ವೆಚ್ಚವನ್ನೂ ಭರಿಸುವುದಾಗಿ ಟಾಟಾ ಗ್ರೂಪ್ ತಿಳಿಸಿದೆ. ಜೊತೆಗೆ ಬಿಜೆ ಮೆಡಿಕಲ್‌ನ ಹಾಸ್ಟೆಲ್ ನಿರ್ಮಾಣಕ್ಕೂ ಸಹಾಯ ನೀಡಲಾಗುವುದು ಎಂದು ತಿಳಿಸಿದೆ.
ಇದನ್ನೂ ಓದಿ: ಹಾಸ್ಟೆಲ್ನಲ್ಲಿದ್ದ 24 ಭಾವಿ ವೈದ್ಯರೂ ಸೇರಿ 265 ಮಂದಿಯ ಜೀವ ತೆಗೆದ ವಿಮಾನ ದುರಂತ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ