newsfirstkannada.com

ಚಂದ್ರಬಾಬು ನಾಯ್ದು ಬಂಧನ ಹಿನ್ನೆಲೆ ಆಂಧ್ರ ಪ್ರದೇಶ ಬಂದ್​ಗೆ ಕರೆ ನೀಡಿದ TDP, ಸಾಥ್​ ಕೊಟ್ಟ ಪವನ್​ ಕಲ್ಯಾಣ್​ ಫ್ಯಾನ್ಸ್​

Share :

11-09-2023

    ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣ

    14 ದಿನ ನ್ಯಾಯಾಂಗ ಬಂಧನದಲ್ಲಿ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು

    ಮಾಜಿ ಸಿಎಂ ಬಂಧನ ಹಿನ್ನೆಲೆ ಆಂಧ್ರ ಪ್ರದೇಶ ಬಂದ್​ಗೆ ಕರೆ ನೀಡಿದ ಟಿಡಿಪಿ ಪಕ್ಷ

ಆಂಧ್ರ ಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ದು ಬಂಧನ ಹಿನ್ನಲೆ ಅವರ ಅಭಿಮಾನಿಗಳಿಂದು ಆಂಧ್ರಪ್ರದೇಶದಲ್ಲಿ ಬಂದ್​​​ಗೆ ಕರೆ ನೀಡಿದ್ದಾರೆ. ನಟ ಪವನ್​ ಕಲ್ಯಾಣ್​ ಅವರ ಜನಸೇನಾ ಪಕ್ಷ ಮತ್ತು ಟಿಡಿಪಿ​ ಕೂಡ ಈ ಬಂದ್​ಗೆ ಬೆಂಬಲ ನೀಡಿವೆ. ಈ ಹಿನ್ನಲೆ ಬೆಳಿಗ್ಗೆಯಿಂದಲೇ ವಿಜಯವಾಡದಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದೆ.

ಮತ್ತೊಂದೆಡೆ ಪ್ರತಿಭಟನೆ, ಬಂದ್ ನಡೆಸಲು ಅವಕಾಶ ನೀಡದ ಪೊಲೀಸರು ಟಿಡಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಏನಿದು ಘಟನೆ?

2014ರಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾದ ಕೆಲವೇ ಕೆಲವು ತಿಂಗಳ ಬಳಿಕ ಚಂದ್ರಬಾಬು ನಾಯ್ಡು ಒಂದು ಮಹತ್ವಾಕಾಂಕ್ಷಿ ಯೋಜನೆ ಘೋಷಿಸುತ್ತಾರೆ. ಆ ಯೋಜನೆಯ ಉದ್ದೇಶ, ನಿರುದ್ಯೋಗಿಗಳಲ್ಲಿ ಕೌಶಲ್ಯ ಅಭಿವೃದ್ಧಿಪಡಿಸೋದು. ಇದಕ್ಕಾಗಿ ಚಂದ್ರಬಾಬು ನಾಯ್ಡು ಕೌಶಲಭಿವೃದ್ಧಿ ನಿಗಮವನ್ನ ಸ್ಥಾಪಿಸಿದರು. ಆರಂಭದಲ್ಲಿ ಚಂದ್ರಬಾಬು ನಾಯ್ಡು ಸೀಮನ್‌ ಇಂಡಿಯಾ ಕಂಪನಿಯ ಜೊತೆ ಎಂಓಯು ಮಾಡಿಕೊಂಡಿತು. ಈ ಪ್ರಾಜೆಕ್ಟ್‌ನ ಸೀಮೆನ್ಸ್‌ ಇಂಡಸ್ಟ್ರಿ ಸಾಫ್ಟ್‌ವೇರ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಮತ್ತು ಡಿಸೈನ್ ಟೆಕ್‌ ಸಿಸ್ಟಮ್ ಪ್ರೈವೇಟ್‌ ಲಿಮಿಟೆಡ್‌ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸೋದಾಗಿ ಹೇಳಿದ ಚಂದ್ರಬಾಬು ನಾಯ್ಡು, ರಾಜ್ಯಾದ್ಯಂತ ತರಬೇತಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದರು.

ಇದನ್ನು ಓದಿ: ಚಂದ್ರಬಾಬು ನಾಯ್ಡುಗೆ ನ್ಯಾಯಾಂಗ ಬಂಧನ.. ವಿಜಯವಾಡದಿಂದ 200 KM ದೂರದ ಇನ್ನೊಂದು ಜೈಲಿಗೆ ಶಿಫ್ಟ್.!

ಎಂಓಯು ಪ್ರಕಾರ, ಯೋಜನೆಯ ಒಟ್ಟು ವೆಚ್ಚ, 3,356 ಕೋಟಿ ರೂಪಾಯಿ. ಈ ಪೈಕಿ ಶೇ.10ರಷ್ಟನ್ನ ರಾಜ್ಯ ಸರ್ಕಾರ ಭರಿಸೋದು, ಉಳಿದ ಹಣವನ್ನ ಸೀಮೆನ್ಸ್ ಕಂಪನಿ ಬಂಡವಾಳ ಹೂಡಬೇಕಿತ್ತು. ಎಲ್ಲ ಅಂದುಕೊಂಡಂತೆ ನಡೆಯಿತು. 2015, ಜನವರಿ 19ರಂದು, ಚಂದ್ರಬಾಬು ನಾಯ್ಡು ವರ್ಚುವಲಿ, 17 ಸ್ಕಿಲ್‌ ಡೆವಲಪ್‌ಮೆಂಟ್‌ ಕೇಂದ್ರಗಳನ್ನ ಉದ್ಘಾಟಿಸಿದರು. ಇದಾದ ನಂತರ ಚಂದ್ರಬಾಬು ನಾಯ್ಡು ಸರ್ಕಾರ ಪತನವಾಗಿ , ಜಗನ್‌ ಸರ್ಕಾರ ಅಸ್ತಿತ್ವಕ್ಕೆ ಬಂತು. ಮಾರ್ಚ್‌ 2021ರಂದು ಅಸೆಂಬ್ಲಿಯಲ್ಲಿ ಮುಖ್ಯಮಂತ್ರಿ ಜಗನ್‌ ಸ್ಕಿಲ್ ಡೆವಲಪ್‌ಮೆಂಟ್‌ ಯೋಜನೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಈ ಭ್ರಷ್ಟಾಚಾರ ರೂವಾರಿಯೇ ಚಂದ್ರಬಾಬು ನಾಯ್ಡು ಅಂತಾ ಆರೋಪಿಸಿದರು. ಪ್ರಾಥಮಿಕ ತನಿಖೆಯ ನಂತರ, ಆಂಧ್ರಪ್ರದೇಶದ ಸಿಐಡಿ ಡಿಸೆಂಬರ್‌ 9, 2021ರಲ್ಲಿ ಎಫ್‌ಐಆರ್‌ ದಾಖಲಿಸಿತು. ಅಲ್ಲಿಂದ ಆಟ ಶುರುವಾಯ್ತು.

ಜಗನ್‌ ಅವರ ಮುಖ್ಯ ಆರೋಪ ಏನಂದ್ರೆ, ಯೋಜನೆ ಜಾರಿಯಾದ ಕೇವಲ ಮೂರೇ ತಿಂಗಳಲ್ಲಿ ಚಂದ್ರಬಾಬು ನಾಯ್ಡು ಅವರು 371 ಕೋಟಿ ರೂಪಾಯಿಯನ್ನ ಅವಸರವಾಗಿ ಬಿಡುಗಡೆ ಮಾಡಿದರು. ಆಗ ಸೀಮನ್‌ ಕಂಪನಿ ಬಂಡವಾಳ ಹೂಡಿಕೆ ಮಾಡೋ ಮುನ್ನವೇ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿತ್ತು ಆರೋಪಿಸಿದೆ. ಬಿಡುಗಡೆಯಾದ ಹಣಕ್ಕೆ ಕಂಪನಿಗಳು ಕಂಪ್ಯೂಟರ್‌ ಸೇರಿದಂತೆ ಇತರೆ ಸಾಮಾಗ್ರಿಗಳನ್ನ ನೀಡಬೇಕಿತ್ತು. ಆದ್ರೆ, ನಕಲಿ ಬಿಲ್ ಸೃಷ್ಟಿಸಿಕೊಂಡು ಹಣ ಕೊಳ್ಳೆ ಹೊಡೆಯಲಾಗಿದೆ ಅನ್ನೋದು ಚಂದ್ರಬಾಬು ನಾಯ್ಡು ಅವರ ಮೇಲಿರೋ ಆರೋಪ. ಈ ಕಾರಣಕ್ಕೆ ಅವರನ್ನು ಅರೆಸ್ಟ್​ ಮಾಡಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಂದ್ರಬಾಬು ನಾಯ್ದು ಬಂಧನ ಹಿನ್ನೆಲೆ ಆಂಧ್ರ ಪ್ರದೇಶ ಬಂದ್​ಗೆ ಕರೆ ನೀಡಿದ TDP, ಸಾಥ್​ ಕೊಟ್ಟ ಪವನ್​ ಕಲ್ಯಾಣ್​ ಫ್ಯಾನ್ಸ್​

https://newsfirstlive.com/wp-content/uploads/2023/09/Chandrababu-naidu.jpg

Load More