ಅನ್ನಭಾಗ್ಯ ಸ್ಕೀಮ್ಗೆ ಬಿಟ್ಟಿಭಾಗ್ಯ ಎಂದ ಶಾಲಾ ಶಿಕ್ಷಕ!
ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಕ್ಕೆ ಶಿಕ್ಷಕ ಅಮಾನತ್ತು
ಸರ್ಕಾರದ ವಿರುದ್ಧ ಪೋಸ್ಟ್ ಹಾಕಿ ಸಸ್ಪೆಂಡ್ ಆದ ಶಿಕ್ಷಕ
ಚಿತ್ರದುರ್ಗ: ಅಧಿಕಾರಕ್ಕೆ ಬಂದ ಕೂಡಲೇ ನಾವು ಅನ್ನಭಾಗ್ಯ ಯೋಜನೆಯಡಿ ಪ್ರತೀ ವ್ಯಕ್ತಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಚುನಾವಣೆಗೆ ಮುನ್ನವೇ ಘೋಷಣೆ ಮಾಡಿದ್ದರು. ಅಲ್ಲದೇ ಐದು ಗ್ಯಾರಂಟಿಗಳು ಜಾರಿ ಮಾಡೇ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಈಗ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಿಎಂ ಆಗಿ ಈಗಾಗಲೇ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ. ಹೀಗಿರುವಾಗಲೇ ಯಾವಾಗ ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಮಾಡಲಿದೆ ಎಂದು ವಿರೋಧ ಪಕ್ಷಗಳು ಪ್ರಶ್ನೆಗಳನ್ನು ಕೇಳುತ್ತಿವೆ.
ಇದರ ಮಧ್ಯೆ ಹಲವರು ಜನ ಬಿಟ್ಟಿ ಭಾಗ್ಯಗಳಿಗಾಗಿ ಕಾಂಗ್ರೆಸ್ಸಿಗೆ ವೋಟ್ ಹಾಕಿ ಗೆಲ್ಲಿಸಿದ್ದಾರೆ. ಇದರಿಂದ ರಾಜ್ಯ ಆರ್ಥಿಕ ದಿವಾಳಿಯಾಲಿದೆ ಎಂದು ಟೀಕಿಸುತ್ತಿದ್ದಾರೆ. ಹೀಗೆ ಅನ್ನಭಾಗ್ಯ ಯೋಜನೆಯನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದ ಸರ್ಕಾರಿ ನೌಕರನೋರ್ವ ಸಸ್ಪೆಂಡ್ ಆಗಿದ್ದಾರೆ. ಅದರಲ್ಲೂ ಈತ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುವ ಶಿಕ್ಷಕ ಎಂಬುದು ಗಮನಾರ್ಹ. ಅನ್ನಭಾಗ್ಯವನ್ನು ಟೀಕಿಸಿ ಅಮಾನತಾಗಿದ್ದು ಮತ್ಯಾರು ಅಲ್ಲ, ಹೊಸದುರ್ಗದ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡೋ ಶಿಕ್ಷಕ. ಈತನ ಹೆಸರು ಶಾಂತಮೂರ್ತಿ. ಈಗ ಸರ್ಕಾರದ ವಿರುದ್ಧ ಪೋಸ್ಟ್ ಹಾಕಿ ಸಸ್ಪೆಂಡ್ ಆಗಿದ್ದಾರೆ. ಶಿಕ್ಷಣ ಇಲಾಖೆ ಮುಜುಗರ ತರಿಸಿದೆ ಎಂದು ಖುದ್ದು ಡಿಡಿಪಿಐ ರವಿಶಂಕರ್ ರೆಡ್ಡಿ ಈ ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ