/newsfirstlive-kannada/media/post_attachments/wp-content/uploads/2024/11/Jasprit-Bumrah.jpg)
ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗಾಗಿ ಭಾರತ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದೆ. ಈ ಮಹತ್ವದ ಸರಣಿಯಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಪಡೆ 1-2 ರಿಂದ ಭಾರೀ ಹಿನ್ನಡೆ ಅನುಭವಿಸಿದೆ. ಟೆಸ್ಟ್ ಸೀರೀಸ್ ಬಳಿಕ ಭಾರತ ಕ್ರಿಕೆಟ್ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಮತ್ತು ಟಿ20 ಸರಣಿ ಆಡಲಿದೆ.
ಸಿಡ್ನಿ ಟೆಸ್ಟ್ ನಂತರ ಟೀಮ್ ಇಂಡಿಯಾ, ಇಂಗ್ಲೆಂಡ್ ಮುಖಾಮುಖಿ ಆಗಲಿವೆ. ಅದರಲ್ಲೂ ಮೊದಲು 5 ಟಿ20 ಪಂದ್ಯಗಳ ಸರಣಿ ಆಡಲಿದೆ. ನಂತರ ಉಭಯ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮುಂದಿನ ವರ್ಷ ನಡೆಯಲಿರೋ ಚಾಂಪಿಯನ್ಸ್ ಟ್ರೋಫಿ ದೃಷ್ಟಿಯಿಂದ ಈ ಸರಣಿ ಎರಡು ತಂಡಗಳಿಗೂ ಬಹಳ ಮಹತ್ವದ್ದಾಗಿದೆ. ಈಗಾಗಲೇ ಏಕದಿನ ಮತ್ತು ಟಿ20 ಸರಣಿಗೆ ವೇಳಾಪಟ್ಟಿ ಪ್ರಕಟ ಆಗಿದೆ.
ಸೀರೀಸ್ ಯಾವಾಗ?
ಇಂಗ್ಲೆಂಡ್ ತಂಡ ಮುಂದಿನ ವರ್ಷ ಭಾರತ ಪ್ರವಾಸ ಕೈಗೊಳ್ಳಲಿದೆ. ಉಭಯ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಜನವರಿ 22ನೇ ತಾರೀಕು ನಡೆಯಲಿದೆ. 2ನೇ ಪಂದ್ಯ ಜನವರಿ 25ರಂದು ಮತ್ತು 3ನೇ ಪಂದ್ಯ ಜನವರಿ 28 ರಂದು, 4ನೇ ಪಂದ್ಯ ಜನವರಿ 31ರಂದು, 5ನೇ ಪಂದ್ಯ ಫೆಬ್ರವರಿ 2ರಂದು ನಡೆಯಲಿದೆ.
ಏಕದಿನ ಸರಣಿ ಫೆಬ್ರವರಿ 6 ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ನಾಗ್ಪುರ ಸ್ಟೇಡಿಯಮ್ನಲ್ಲಿ ನಡೆಯಲಿದೆ. 2ನೇ ಏಕದಿನ ಪಂದ್ಯ ಫೆಬ್ರವರಿ 9 ರಂದು, 3ನೇ ಏಕದಿನ ಪಂದ್ಯ ಫೆಬ್ರವರಿ 12ರಂದು ನಡೆಯಲಿದೆ. ವೇಳಾಪಟ್ಟಿ ಹೊರಬೀಳುತ್ತಿದ್ದಂತೆ ಟೀಮ್ ಇಂಡಿಯಾಗೆ ಶಾಕಿಂಗ್ ನ್ಯೂಸ್ ಒಂದಿದೆ.
ಬುಮ್ರಾಗೆ ರೆಸ್ಟ್
ಇಂಗ್ಲೆಂಡ್ ವಿರುದ್ಧ ಸರಣಿಯಿಂದ ಟೀಮ್ ಇಂಡಿಯಾ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಗುಳಿಯುವ ಸಾಧ್ಯತೆಯಿದೆ. ಬಿಸಿಸಿಐ ಆಯ್ಕೆ ಸಮಿತಿ ಬುಮ್ರಾ ಅವರಿಗೆ ವಿಶ್ರಾಂತಿ ಮಾಡಿ ಎಂದು ಹೇಳಿದೆಯಂತೆ. ಬುಮ್ರಾ ಅವರಿಗೆ ಚಾಂಪಿಯನ್ಸ್ ಟ್ರೋಫಿ ಟೂರ್ನಿವರೆಗೆ ವಿಶ್ರಾಂತಿ ನೀಡಲಾಗುವುದು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಇಂಗ್ಲೆಂಡ್ ವಿರುದ್ಧ ಮಹತ್ವದ ಸೀರೀಸ್; ಟೀಮ್ ಇಂಡಿಯಾಗೆ ಭರ್ಜರಿ ಗುಡ್ನ್ಯೂಸ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ