ಟೀಮ್​​ ಇಂಡಿಯಾಗೆ ಬಿಗ್​ ಶಾಕ್​​; ಬುಮ್ರಾ 3ನೇ ಟೆಸ್ಟ್​ ಆಡೋದು ಡೌಟ್​​; ಕಾರಣವೇನು?

author-image
Ganesh Nachikethu
Updated On
ಟೀಮ್​​ ಇಂಡಿಯಾಗೆ ಬಿಗ್​ ಶಾಕ್​​; ಬುಮ್ರಾ 3ನೇ ಟೆಸ್ಟ್​ ಆಡೋದು ಡೌಟ್​​; ಕಾರಣವೇನು?
Advertisment
  • ಅಡಿಲೇಡ್​ನಲ್ಲಿ ನಡೆದ 2ನೇ ಟೆಸ್ಟ್​ ಪಂದ್ಯದಲ್ಲಿ ಹೀನಾಯ ಸೋಲು
  • 2ನೇ ಟೆಸ್ಟ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ತಂಡ
  • ಬ್ರಿಸ್ಬೇನ್‌ನಲ್ಲಿ ನಡೆಯಲಿರೋ 3ನೇ ಟೆಸ್ಟ್​ ಭಾರತ ತಂಡ ಗೆಲ್ಲಲೇಬೇಕು

ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯದಲ್ಲಿ 290ಕ್ಕೂ ಹೆಚ್ಚು ರನ್​​ಗಳಿಂದ ಗೆದ್ದು ವಿಶ್ವದಾಖಲೆ ಬರೆದಿದ್ದ ಟೀಮ್​​ ಇಂಡಿಯಾ 2ನೇ ಮ್ಯಾಚ್​​ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಮುಗ್ಗರಿಸಿದೆ. ಅಡಿಲೇಡ್​ನಲ್ಲಿ ನಡೆದ 2ನೇ ಟೆಸ್ಟ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಹೀನಾಯ ಸೋಲು ಕಂಡಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮುನ್ನ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್​​ ವಿರುದ್ಧ ಟೀಮ್​ ಇಂಡಿಯಾ ಹೀನಾಯ ಸೋಲು ಕಂಡಿದೆ. ಬರೋಬ್ಬರಿ 20 ವರ್ಷಗಳ ನಂತರ ತವರಿನಲ್ಲೇ ಟೀಮ್​ ಇಂಡಿಯಾ ನ್ಯೂಜಿಲೆಂಡ್​ ವಿರುದ್ಧ 3-0 ಅಂತರದಿಂದ ಟೆಸ್ಟ್​ ಸೀರೀಸ್​ನಲ್ಲಿ ವೈಟ್​ ವಾಶ್​ ಆಗಿದೆ.

ಇನ್ನು, ಈ ಸೋಲಿನೊಂದಿಗೆ ಟೀಮ್​ ಇಂಡಿಯಾದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​​ ಫೈನಲ್ ಹಾದಿ ಮತ್ತಷ್ಟು ಕಠಿಣಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ 4 ಪಂದ್ಯ ಗೆಲ್ಲಲೇಬೇಕಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಾಲ್ಕು ಗೆದ್ದರಷ್ಟೇ ಫೈನಲ್​ಗೆ ಸುಗಮವಾಗಿ ಅರ್ಹತೆ ಪಡೆಯಲ್ಲಿದೆ. ಇಲ್ಲದಿದ್ದರೆ, ಮೂರನೇ ಬಾರಿಗೆ ಫೈನಲ್ ಆಡುವ ಟೀಮ್​ ಇಂಡಿಯಾ ಕನಸು ಭಗ್ನಗೊಳ್ಳಲಿದೆ. ಇದರ ಮಧ್ಯೆ ಟೀಮ್​ ಇಂಡಿಯಾಗೆ ಶಾಕಿಂಗ್​ ನ್ಯೂಸ್​ ಒಂದಿದೆ.

ಟೀಮ್​ ಇಂಡಿಯಾಗೆ ಬುಮ್ರಾ ಬಿಗ್​ ಶಾಕ್​​

ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಬುಮ್ರಾ ಬೌಲಿಂಗ್ ಮಾಡುವಾಗ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ತಕ್ಷಣವೇ ಫಿಸಿಯೋ ಚಿಕಿತ್ಸೆ ನೀಡಿದರು. ಪರಿಣಾಮ ಬುಮ್ರಾ ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಮೋರ್ನೆ ಮೊರ್ಕೆಲ್ ಫಿಟ್ ಎಂದು ಘೋಷಿಸಿದರು. ಆಡಿಲೇಡ್‌ನಲ್ಲಿ ನಡೆದ ಟೆಸ್ಟ್‌ ಮುಗಿದಿದ್ದು, ಟೀಮ್ ಇಂಡಿಯಾದ ಆಟಗಾರರು ಅಭ್ಯಾಸ ಶುರು ಮಾಡಿದ್ದಾರೆ. ಬುಮ್ರಾ ಒಂದು ದಿನವೂ ಅಭ್ಯಾಸಕ್ಕೆ ಹಾಜರಾಗದೇ ಇದ್ದಿರುವುದು ಕುತೂಹಲ ಮೂಡಿಸಿದೆ. ಸದ್ಯಕ್ಕೆ ಲಭ್ಯವಾಗಿರೋ ಪ್ರಕಾರ ಬುಮ್ರಾ 3ನೇ ಟೆಸ್ಟ್​ ಆಡೋದು ಡೌಟ್​ ಆಗಿದೆ.

ಇದನ್ನೂ ಓದಿ:ರಜತ್​ ಹೆಗಲಿಗೆ ಆರ್​​​ಸಿಬಿ ನಾಯಕತ್ವ; ಕ್ಯಾಪ್ಟನ್ಸಿ ಹೊಣೆ ಹೊರಲು ಪಾಟಿದಾರ್​ ಸಿದ್ಧ

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment