/newsfirstlive-kannada/media/post_attachments/wp-content/uploads/2024/11/Jasprit-Bumrah.jpg)
ಸಿಡ್ನಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡುತ್ತಿದೆ. ಟೀಮ್ ಇಂಡಿಯಾ ಬೌಲರ್ಗಳ ದಾಳಿಗೆ ಆಸ್ಟ್ರೇಲಿಯಾ ತಂಡ ತತ್ತರಿಸಿ ಹೋಗಿದೆ. ಇದರ ಪರಿಣಾಮ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮುನ್ನಡೆ ಸಾಧಿಸಿದೆ.
ಇನ್ನು, ಪಂದ್ಯದ ಮಧ್ಯೆಯೇ ಟೀಮ್ ಇಂಡಿಯಾ ಫ್ಯಾನ್ಸ್ಗೆ ಆಘಾತದ ಸುದ್ದಿ ಒಂದಿದೆ. ಟೀಮ್ ಇಂಡಿಯಾದ ಅತ್ಯಂತ ಯಶಸ್ವಿ ಬೌಲರ್ ಬುಮ್ರಾ. ಇವರು ಮೊದಲ ಇನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಇವರನ್ನು ಸಪೋರ್ಟಿಂಗ್ ಸ್ಟ್ಯಾಫ್ ಮೈದಾನದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯಕ್ಕೆ ಸಿಕ್ಕಿರೋ ಮಾಹಿತಿ ಪ್ರಕಾರ ಬುಮ್ರಾ 2ನೇ ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡೋದು ಡೌಟ್ ಆಗಿದೆ.
ತಂಡದಿಂದಲೇ ಬುಮ್ರಾ ಔಟ್
ಭರ್ಜರಿ ಪಾರ್ಮ್‌ನಲ್ಲಿರೋ ಬುಮ್ರಾ ಬೌಲಿಂಗ್ ಮಾತ್ರವಲ್ಲ ನಾಯಕತ್ವದಲ್ಲೂ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಬುಮ್ರಾ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ 32 ವಿಕೆಟ್ ಪಡೆದಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಬುಮ್ರಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದರು. ಈಗ ಇವರು 2ನೇ ಇನ್ನಿಂಗ್ಸ್ಗೆ ಕಮ್ಬ್ಯಾಕ್ ಮಾಡೋದು ಅನುಮಾನ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.
ತಂಡದ ಸ್ಕೋರ್ ಹೇಗಿದೆ?
ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ 4 ರನ್ಗಳ ಮುನ್ನಡೆ ಸಾಧಿಸಿದೆ. ಅಂದರೆ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ ಬ್ಯಾಟ್ಸ್ಮನ್ಗಳನ್ನು ಕಟ್ಟಿಹಾಕುವಲ್ಲಿ ಭಾರತದ ಬೌಲರ್ಸ್ ಯಶಸ್ವಿಯಾದರು. ಕೇವಲ 181 ರನ್ಗಳಿಗೆ ಆಲೌಟ್ ಮಾಡಿದರು. 4 ರನ್ಗಳ ಮುನ್ನಡೆಯನ್ನು ಕಾಯ್ದುಕೊಂಡು ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಸಂಕಷ್ಟಕ್ಕೆ ಒಳಗಾಗಿದೆ. 6 ವಿಕೆಟ್ ಕಳೆದುಕೊಂಡು 141 ರನ್ಗಳಿಸಿದೆ. ಆ ಮೂಲಕ ಭಾರತವು 145 ರನ್ಗಳ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ: ಇದೇ ಅಲ್ಲವಾ ನಾಯಕನ ಸರಳತೆ.. ಕೋಟಿ ಕೋಟಿ ಜನರ ಹೃದಯಗೆದ್ದ ರೋಹಿತ್ ಶರ್ಮಾ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ