/newsfirstlive-kannada/media/post_attachments/wp-content/uploads/2024/08/KL-Rahul_Gambhir_Rohit.jpg)
ನಾಳೆ ಅಡಿಲೇಡ್ನಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಮಧ್ಯೆ 2ನೇ ಟೆಸ್ಟ್ ಪಂದ್ಯ ನಡೆಯಲಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 290 ರನ್ಗಳಿಂದ ಗೆದ್ದು ಬೀಗಿರೋ ಟೀಮ್ ಇಂಡಿಯಾ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಈ ನಡುವೆ ಕೆಎಲ್ ರಾಹುಲ್ ಯಾವ ಸ್ಥಾನದಲ್ಲಿ ಆಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಮೊದಲ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿದಿದ್ರು. ಇವರ ಅನುಪಸ್ಥಿತಿಯಲ್ಲಿ ಜಸ್ಪ್ರಿತ್ ಬುಮ್ರಾ ಟೀಮ್ ಇಂಡಿಯಾವನ್ನು ಲೀಡ್ ಮಾಡಿದ್ರು. ಇಷ್ಟೇ ಅಲ್ಲ ಕೆ.ಎಲ್ ರಾಹುಲ್ ತನಗೆ ಓಪನರ್ ಆಗಿ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡರು.
ಅದ್ಭುತ ಬ್ಯಾಟಿಂಗ್ ಮಾಡಿದ್ದ ರಾಹುಲ್
ಪರ್ತ್ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ರಾಹುಲ್, ಎರಡನೇ ಇನಿಂಗ್ಸ್‌ನಲ್ಲಿ ಅರ್ಧಶತಕದ ಸಿಡಿಸಿ ಅಬ್ಬರಿಸಿದರು. ಜೈಸ್ವಾಲ್, ಕೆ.ಎಲ್ ರಾಹುಲ್ ಜೋಡಿ 200ಕ್ಕೂ ಹೆಚ್ಚು ರನ್ಗಳ ಜೊತೆಯಾಟ ಆಡಿತು.
ರಾಹುಲ್ಗೆ ಗುಡ್ನ್ಯೂಸ್ ಕೊಟ್ಟ ರೋಹಿತ್!
ನಾನು ಮೊದಲ ಟೆಸ್ಟ್ ಪಂದ್ಯ ಆಡಲು ಆಗಿರಲಿಲ್ಲ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ಬಂದಿದ್ದೇನೆ. ಮೊದಲ ಪಂದ್ಯದಲ್ಲಿ ರಾಹುಲ್ ಆರಂಭಿಕರಾಗಿ ಉತ್ತಮ ಪ್ರದರ್ಶನ ನೀಡಿದ್ರು. 2ನೇ ಟೆಸ್ಟ್‌ನಲ್ಲಿ ಇದೇ ರೀತಿ ಬ್ಯಾಟ್ ಬೀಸಲಿದ್ದಾರೆ ಎಂದರು.
ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಜೋಡಿ ಮೇಲೆ ನಮಗೆ ಭರವಸೆ ಇದೆ. 2ನೇ ಟೆಸ್ಟ್‌ನಲ್ಲೂ ಇದೇ ಜೋಡಿ ಓಪನಿಂಗ್ ಮಾಡಲಿದೆ. ತಂಡದ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.
ಇದನ್ನೂ ಓದಿ:ಒಂದೇ ಪಂದ್ಯದಲ್ಲಿ ಬರೋಬ್ಬರಿ 37 ಸಿಕ್ಸ್ ಸಿಡಿಸಿದ್ರು; RCB ಸ್ಟಾರ್ ಕೃನಾಲ್ ಪಾಂಡ್ಯ ನೇತೃತ್ವದಲ್ಲಿ ದಾಖಲೆ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ