/newsfirstlive-kannada/media/post_attachments/wp-content/uploads/2023/10/Kohli_Rohit_123.jpg)
ಇಂದು ವೆಸ್ಟ್ ಇಂಡೀಸ್ನ ಬಾರ್ಬಡೋಸ್ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರೋ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಆರಂಭಿಕ ಪಂದ್ಯದಲ್ಲಿ ಟೀಮ್ ಇಂಡಿಯಾ, ಅಫ್ಘಾನ್ ತಂಡಗಳು ಮುಖಾಮುಖಿ ಆಗುತ್ತಿವೆ.
ಟಾಸ್ ಗೆದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಫಸ್ಟ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಶೀದ್ ಖಾನ್ ನೇತೃತ್ವದ ಅಫ್ಘಾನ್ ತಂಡ ಬೌಲಿಂಗ್ ಮಾಡುತ್ತಿದೆ. ಫೈನಲ್ಗೆ ಹೋಗಲು ಟೀಮ್ ಇಂಡಿಯಾ ಇಂದಿನ ಪಂದ್ಯ ಗೆಲ್ಲಲೇಬೇಕಿದೆ. ಹಾಗಾಗಿ ಟೀಮ್ ಇಂಡಿಯಾದಲ್ಲಿ ಅಚ್ಚರಿ ಬದಲಾವಣೆ ಆಗಿದ್ದು, ಕುಲ್ದೀಪ್ ಯಾದವ್ಗೆ ಅವಕಾಶ ನೀಡಲಾಗಿದೆ.
ಉಭಯ ತಂಡಗಳು ಹೀಗಿವೆ..!
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ಕ್ಯಾಪ್ಟನ್), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ಅಫ್ಘಾನ್ ಟೀಮ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ನಜಿಬುಲ್ಲಾ ಝದ್ರಾನ್, ಹಜರತುಲ್ಲಾ ಝಜೈ, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ನವೀನ್ ಉಲ್ ಹಕ್, ಫಜಲ್ಹಕ್ ಫರೂಕ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ